ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಆರ್ ಎಸ್ ಎಸ್ ಬ್ಯಾನ್ ಮಾಡ್ತೇವೆ ಎಂದು ಎಚ್ಚರಿಕೆ ನೀಡಿದ ಪ್ರಿಯಾಂಕ್ ಖರ್ಗೆ

Date:

spot_img

ಬೆಂಗಳೂರು : “ನಾವು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮೇಲೆ ನಿಷೇಧ ಹೇರಲಾಗುತ್ತದೆ” ಎಂಬ ತೀವ್ರವಾದ ಹೇಳಿಕೆಯನ್ನು ರಾಜ್ಯದ ಮಾಹಿತಿ ತಂತ್ರಜ್ಞಾನ ಹಾಗೂ ಡಿಜಿಟಲ್ ಸೇವಾ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿದ್ದಾರೆ.

ಬೆಂಗಳೂರು ನಗರದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಖರ್ಗೆ, “ಇದಕ್ಕೂ ಮೊದಲು ಕಾಂಗ್ರೆಸ್ ನೇತೃತ್ವದ ಸರ್ಕಾರವು ಆರ್‌ಎಸ್‌ಎಸ್ ಅನ್ನು ಎರಡು ಬಾರಿ ನಿಷೇಧಿಸಿತ್ತು. ಆಗ ಅವರು ಬಂದು ಕೈಕಾಲು ಹಿಡಿದು, ನಿಷೇಧ ಹಿಂತೆಗೆದುಕೊಳ್ಳಲು ಬೇಡಿಕೊಂಡಿದ್ದರು. ಆ ವೇಳೆ ನಿಷೇಧ ಮಾಡುವುದು ತಪ್ಪು ಎಂದು ಅನಿಸಿತ್ತು. ಆದರೆ ಈಗ ನಾವು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ಈ ಬಾರಿಗೆ ಆರ್‌ಎಸ್‌ಎಸ್ ಮೇಲೆ ಖಚಿತವಾಗಿ ನಿಷೇಧ ಹೇರಲಾಗುತ್ತದೆ” ಎಂದು ಹೇಳಿದರು.

RSS ಮುಖಂಡ ಹೊಸಬಾಳೆ ಹೇಳಿಕೆಗೆ ಕಿಡಿಕಾರಿಕೆ
ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ ಅವರು ಸಂವಿಧಾನದಿಂದ “ಜಾತ್ಯಾತೀತ” ಮತ್ತು “ಸಮಾಜವಾದಿ” ಪದಗಳನ್ನು ತೆಗೆದುಹಾಕಬೇಕು ಎಂದು ಮಾಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, “ಹೊಸಬಾಳೆ ಯಾವ ಸ್ಕೂಲ್ ಆಫ್ ಥಾಟ್‌ನಿಂದ ಬರುತ್ತಾರೆ ಎಂಬುದು ಸ್ಪಷ್ಟವಾಗಬೇಕಿದೆ. ಆರ್‌ಎಸ್‌ಎಸ್ ಚಿಂತನೆಗೆ ನಮ್ಮ ವಿರೋಧ ಸದಾ ಇರುತ್ತದೆ. ಅವರ ದೃಷ್ಟಿಕೋನವೇ ಸಂವಿಧಾನದ ವಿರುದ್ಧವಾಗಿದೆ” ಎಂದು ಕಿಡಿಕಾರಿದರು.

ಅಂಬೇಡ್ಕರ್ ವಿರೋಧಿಗಳಾದ ಆರ್‌ಎಸ್‌ಎಸ್?
ಪ್ರಿಯಾಂಕ್ ಖರ್ಗೆ ಅವರು ಮತ್ತೊಂದು ಗಂಭೀರ ಆರೋಪವನ್ನೂ ಮಾಡಿದ್ದು, “ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಿಗೆ ಆರ್‌ಎಸ್‌ಎಸ್ ವಿರೋಧಿಯಾಗಿದೆ. ಈ ಕುರಿತು ನಾನು ಬಿಜೆಪಿ ನಾಯಕರಿಗೆ ದಾಖಲೆಗಳನ್ನೇ ಕೊಟ್ಟಿದ್ದೇನೆ. ಆದರೆ ಅವರು ನಾಯಿ ತರಹ ಬೊಗಳುತ್ತಾರೆ ಅಂತ ವಿಷಯ ಡೈವರ್ಟ್‌ ಮಾಡುತ್ತಾರೆ. ಇವರು ಮೊದಲು ಸಂವಿಧಾನ ಓದಿಕೊಳ್ಳಲಿ” ಎಂದು ಹೇಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.