
ಹೆಕ್ಕಡ್ಕ : ಹೆಕ್ಕಡ್ಕ ಮಠದ ಶ್ರೀ ಲಕ್ಷ್ಮೀನಾರಾಯಣ ದೇವರ ಸನ್ನಿಧಿಯಲ್ಲಿ ದಿನಾಂಕ 12/09/2025ರ ಶುಕ್ರವಾರದಂದು ಸಾರ್ವಜನಿಕ ಸೋಣಾರ್ಥಿ ಹೂವಿನ ಪೂಜೆಯು ವಿಜೃಂಭಣೆಯಿಂದ ಜರುಗಿತು. ಸಂಜೆ 7:00 ಗಂಟೆಗೆ ಮಹಾ ಮಂಗಳಾರತಿ ನೆರವೇರಿತು.

ಈ ಪೂಜಾ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು ಎಂದು ಹೆಕ್ಕಡ್ಕ ಮಠದ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ್ ಭಟ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.