“ಬೈಲೂರಿನಲ್ಲಿ ಮತ್ತೆ ಕಂಚಿನ ಪರಶುರಾಮ ಪ್ರತಿಮೆ ಪ್ರತಿಷ್ಠಾಪಿಸಲು ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಉದಯ ಶೆಟ್ಟಿ ಮುನಿಯಾಲು ಕ್ರಮಕ್ಕೆ ಸುಧೀರ್ ಹೆಗ್ಡೆ ಬೆಂಬಲ”

Date:

spot_img

ಹಲವಾರು ವಿವಾದಗಳಿಗೆ ಕಾರಣವಾದ ಬೈಲೂರು ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಮತ್ತೆ ನೈಜ ಕಂಚಿನ ಪರಶುರಾಮ ಪ್ರತಿಮೆ ಪ್ರತಿಷ್ಟಾಪನೆಗಾಗಿ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಬೈಲೂರಿನ ಹಿರಿಯ ಮುಖಂಡರಾದ ಸುಧೀರ್ ಹೆಗ್ಡೆ ಸ್ವಾಗತಿಸಿದ್ದಾರೆ.

2023 ರ ಜನವರಿಯಲ್ಲಿ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆ ಪ್ರತಿಷ್ಠಾಪನೆಯಾದಾಗ ನಮ್ಮೂರಿನಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರ ಉದ್ಘಾಟನೆಯಾಗಿದೆ ಎಂದು ಸ್ಥಳೀಯರಾದ ನಾವು ಅತ್ಯಂತ ಸಂತಸಪಟ್ಟಿದ್ದೆವು , ಆದರೆ ಪ್ರತಿಮೆ ನಿರ್ಮಾಣದಲ್ಲಾದ ಲೋಪ ದೋಷಗಳ ವಿವಾದದಿಂದಾಗಿ ಊರಿನವರಾದ ನಮ್ಮ ಸಂತಸವು ಹೆಚ್ಚು ಸಮಯ ಉಳಿಯದೆ ನಮಗೆ ಬೇಸರ ಉಂಟಾಗಿದೆ. ಪರಶುರಾಮ ಪ್ರತಿಮೆ ವಿವಾದದಿಂದಾಗಿ ನಮ್ಮೂರಿನ ಹೆಸರು ಪದೇ ಪದೇ ಮಾದ್ಯಮದಲ್ಲಿ ಬರುತ್ತಿರುವುದರಿಂದ ನಮಗೆ ತೀವ್ರ ಮುಜುಗರ ಉಂಟಾಗಿದೆ.

ಪ್ರತಿಮೆ ನಿರ್ಮಾಣದ ವಿಚಾರದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಆ ಬಗ್ಗೆ ನಮ್ಮ ಅಭ್ಯಂತರವಿಲ್ಲ. ಆದರೆ ಯಾರದ್ದೋ ತಪ್ಪಿನಿಂದಾಗಿ ಊರವರಾದ ನಮಗೆ ತೀವ್ರ ಮುಜುಗರ ಉಂಟಾಗುತ್ತಿದೆ. ಹಾಗಾಗಿ ಮತ್ತೆ ಅದೇ ಜಾಗದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಾಣ ಆಗಬೇಕು. ಆ ಮೂಲಕ ಊರಿಗೆ ಅಂಟಿದ ಕಳಂಕದ ಕೊಳೆ ತೊಳೆದು ಹೋಗಬೇಕು ಎನ್ನುವುದು ಸ್ಥಳೀಯರ ಹಾಗೂ ಗ್ರಾಮಸ್ಥರಾದ ನಮ್ಮೆಲ್ಲರ ಆಶಯವಾಗಿದೆ. ಮಾಧ್ಯಮಗಳಲ್ಲಿ ವರದಿಯಾದಂತೆ ಇಲ್ಲಿ ಮತ್ತೆ ಕಂಚಿನ ಪರಶುರಾಮ ಪ್ರತಿಮೆ ನಿರ್ಮಾಣವಾಗಬೇಕು ಎಂದು ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿರುವುದನ್ನು ನಾವೆಲ್ಲ ಸ್ವಾಗತಿಸುತ್ತೇವೆ ಮತ್ತು ತುಳುನಾಡಿನ ಸೃಷ್ಠಿಕರ್ತ ಮಹಾವಿಷ್ಣುವಿನ ಅವತಾರವಾಗಿರುವ ಭಗವಾನ್ ಪರಶುರಾಮನ ಕಂಚಿನ ಪ್ರತಿಮೆ ಪುನರ್ ಪ್ರತಿಷ್ಠಾಪನೆಯ ಕೆಲಸ ಕಾರ್ಯಗಳಿಗೆ ಊರವರಾಗಿ ನಾವೆಲ್ಲರೂ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಸುಧೀರ್ ಹೆಗ್ಡೆ ಮಾದ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.