
ಮಂಗಳೂರು (ಕುಲಾಲ ವರ್ಲ್ಡ್ ಡಾಟ್ ಕಾಮ್): ಮೂಡುಬಿದಿರೆ ಸಮಾಜ ಮಂದಿರದಲ್ಲಿ ಇತ್ತೀಚೆಗೆ ನಡೆದ ‘ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ – 2025’ ಸ್ಪರ್ಧೆಯಲ್ಲಿ ಪೂರ್ವಿ ಕುಲಾಲ್ ಅವರು ‘ಮಿಸ್ ಕ್ವೀನ್ ಕರಾವಳಿ 2025’ ಬಿರುದನ್ನು ಗೆದ್ದುಕೊಂಡಿದ್ದಾರೆ. ಈ ಸ್ಪರ್ಧೆಯನ್ನು ಮೂಡುಬಿದಿರೆಯ ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಸುಮಾರು 60ಕ್ಕೂ ಹೆಚ್ಚು ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಪೂರ್ವಿ ಕುಲಾಲ್ ಅವರು ಹಿರಿಯಡ್ಕ ಗ್ರೀನ್ ಪಾರ್ಕ್ ಸೆಂಟ್ರಲ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ. ಅವರು ಪೆರ್ಡೂರಿನ ನಿವಾಸಿ ಏಕನಾಥ್ ಕುಲಾಲ್ ಮತ್ತು ಗಾಯತ್ರಿ ಕುಲಾಲ್ ದಂಪತಿಯ ಪುತ್ರಿಯಾಗಿದ್ದಾರೆ. ಇದಕ್ಕೂ ಮುಂಚೆ, ಪೂರ್ವಿ ಕುಲಾಲ್ ಅವರು ಅಬ್ಯಾಕ್ ಎಂಟರ್ ಟೈನ್ ಮೆಂಟ್ ವತಿಯಿಂದ ಉಡುಪಿಯಲ್ಲಿ ನಡೆದ ಫ್ಯಾಶನ್ ಶೋ ಸ್ಪರ್ಧೆಯಲ್ಲಿ ‘ಕ್ಯೂಟ್ ಸ್ಮೈಲ್’ ಸಬ್ ಟೈಟಲ್ ಗೆದ್ದು ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ.
