ಪುತ್ತೂರು ಅತ್ಯಾಚಾರ ಪ್ರಕರಣ: ಅಶೋಕ್ ರೈ ಆಕ್ರೋಶ, 48 ಗಂಟೆಯಲ್ಲಿ ಆರೋಪಿ ಬಂಧನಕ್ಕೆ ಸೂಚನೆ ನೀಡಿದ್ದ ಬೆನ್ನಲ್ಲೇ ಆರೋಪಿ ಮೈಸೂರಿನಲ್ಲಿ ಸೆರೆ!

Date:

spot_img

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯನ್ನು ಎರಡು ದಿನಗಳೊಳಗೆ ಬಂಧಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಖಡಕ್ ಸೂಚನೆ ನೀಡಿದ್ದರು.

ಜಿಲ್ಲಾ ಎಸ್‌ಪಿ ಅವರಿಗೆ ದೂರವಾಣಿ ಕರೆ ಮಾಡಿದ ಶಾಸಕ ಅಶೋಕ್ ರೈ, “ಆರೋಪಿ ಎಲ್ಲೇ ಅಡಗಿದ್ದರೂ ಆತನನ್ನು ತಕ್ಷಣ ಬಂಧಿಸಬೇಕು. ಆರೋಪಿಯ ಬಂಧನದಲ್ಲಿ ವಿಳಂಬವಾಗಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಆದ್ದರಿಂದ, ವಿಶೇಷ ತಂಡವನ್ನು ರಚಿಸಿ, ಎರಡು ದಿನದೊಳಗೆ ಆತನನ್ನು ಬಂಧಿಸಬೇಕು. ನೊಂದ ಯುವತಿಗೆ ನ್ಯಾಯ ಒದಗಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕು. ಇಲಾಖೆಗೆ ನನ್ನಿಂದ ಯಾವುದೇ ನೆರವು ಬೇಕಿದ್ದರೂ ಒದಗಿಸಲು ಸಿದ್ಧನಿದ್ದೇನೆ” ಎಂದು ತಿಳಿಸಿದ್ದರು.ಇದರ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ಜೆ ರಾವ್ (21) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ.

ಜುಲೈ 4 ರಂದು ರಾತ್ರಿ ಮೈಸೂರಿನ ಟಿ. ನರಸಿಪುರದಲ್ಲಿ ಪೊಲೀಸರು ಕೃಷ್ಣ ಜೆ ರಾವ್‌ನನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದಾರೆ. ಆರೋಪಿಯ ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ