ನಾಯಿ ಕಡಿತದಿಂದ ರೇಬಿಸ್! ಚಿಕಿತ್ಸೆ ವಿಳಂಬ – ಸುಳ್ಯದಲ್ಲಿ ಮಹಿಳೆ ದುರ್ಮರಣ!

Date:

spot_img

ಸುಳ್ಯದ ಸಂಪಾಜೆಯಲ್ಲಿ ನಾಯಿ ಕಡಿತಕ್ಕೆ ಒಳಗಾದ 42 ವರ್ಷದ ಮಹಿಳೆ ಚಿಕಿತ್ಸೆ ಪಡೆಯದೆ ಇದ್ದ ಕಾರಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಫೆಬ್ರವರಿ 7ರಂದು ಅರಂತೋಡಿನಲ್ಲಿ ತೋಟದ ಕೆಲಸ ಮಾಡುತ್ತಿದ್ದಾಗ ನಾಯಿಮರಿಯೊಂದು ಅವರ ಮೇಲೆ ದಾಳಿ ಮಾಡಿತ್ತು. ಆದರೆ ಈ ಬಗ್ಗೆ ಅವರು ಯಾರಿಗೂ ಹೇಳದೆ, ಯಾವುದೇ ಚಿಕಿತ್ಸೆ ಕೂಡ ಪಡೆಯಲಿಲ್ಲ.

ರೇಬಿಸ್ ದೃಢ: ಚಿಕಿತ್ಸೆಗೆ ವಿಳಂಬ ದುರಂತಕ್ಕೆ ಕಾರಣ!
ಸೋಮವಾರ ಹೊಟ್ಟೆನೋವು ಕಾಣಿಸಿಕೊಂಡಿದ್ದ ಕಾರಣ ಅವರು ಸುಳ್ಯದ ಸರಕಾರಿ ಆಸ್ಪತ್ರೆಗೆ ತೆರಳಿದಾಗ ನೀರನ್ನು ನೋಡುತ್ತಲೇ ಬೊಬ್ಬೆ ಹಾಕುವಂತಹ ವಿಚಿತ್ರ ಲಕ್ಷಣಗಳು ಗೋಚರಿಸಿದವು. ಹೆಚ್ಚಿನ ವಿಚಾರಣೆ ನಡೆಸಿದಾಗ ನಾಯಿ ಕಡಿತದ ಬಗ್ಗೆ ಮಾಹಿತಿ ಬಹಿರಂಗವಾಯಿತು. ತಕ್ಷಣ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 20ರಂದು ಮೃತಪಟ್ಟರು.

ಇತರರಿಗೂ ಅಪಾಯ?
ಮಹಿಳೆಗೆ ಕಚ್ಚಿದ ನಾಯಿಮರಿ ಇನ್ನೂ ಹಲವರನ್ನು ಕಚ್ಚಿರುವ ಶಂಕೆ ವ್ಯಕ್ತವಾಗಿದೆ. ಆದರೆ ಪ್ರಸ್ತುತ ನಾಯಿ ಎಲ್ಲಿ ಹೋದೆಯೆಂಬ ಬಗ್ಗೆ ಸ್ಪಷ್ಟತೆ ಇಲ್ಲ. ಈ ಹಿನ್ನೆಲೆಯಲ್ಲಿ ಪರಿಸರದ ಹಲವರಿಗೆ ಹಾಗೂ ಕುಟುಂಬದವರಿಗೆ ಎಆರ್‌ವಿ ಲಸಿಕೆ ನೀಡಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.