“ರಾಹುಲ್ ಗಾಂಧಿಯವರ ತ್ಯಾಗ ದೇಶದ ಯುವಕರಿಗೆ ಮಾದರಿಯಾಗಬೇಕು”: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

spot_img

ಬೆಳಗಾವಿ: ಲೋಕಸಭೆ ವಿಪಕ್ಷ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಷ್ಟ ಮತ್ತು ತ್ಯಾಗ ದೇಶದ ಯುವಕರಿಗೆ ಮಾದರಿಯಾಗಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದ ಯುವ ಕಾಂಗ್ರೆಸ್ ಪ್ರತಿಜ್ಞಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಮಗ, ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮೊಮ್ಮಗ ಆದರೂ, ರಾಹುಲ್ ಗಾಂಧಿ ಒಬ್ಬ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ ಎಂದು ಗುಣಗಾನ ಮಾಡಿದರು.

ಬಿಜೆಪಿ-ಆರ್‌ಎಸ್‌ಎಸ್‌ ವಿರುದ್ಧ ಹೆಬ್ಬಾಳ್ಕರ್ ಕಿಡಿ

“ತೋರಿಕೆಗೆ ಮಾತ್ರ ದೇಶಭಕ್ತಿಯ ಹೆಸರಿನಲ್ಲಿ ಬಿಜೆಪಿ ಯುವಕರನ್ನು ವಂಚಿಸುವ ಕೆಲಸ ಮಾಡುತ್ತಿದೆ. ನಮ್ಮ ನಾಯಕ ರಾಹುಲ್ ಗಾಂಧಿಯವರ ಆದರ್ಶಗಳು ಎಲ್ಲಾ ಯುವಕರಿಗೆ ಮಾರ್ಗದರ್ಶಿಯಾಗಬೇಕು” ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ಹರಿಹಾಯ್ದ ಅವರು, “ವಾಟ್ಸಾಪ್ ಯೂನಿವರ್ಸಿಟಿ ಮತ್ತು ಫೇಸ್‌ಬುಕ್ ಯೂನಿವರ್ಸಿಟಿಯಿಂದ ತಪ್ಪು ಸಂದೇಶಗಳು ರವಾನೆಯಾಗುತ್ತಿವೆ. ಗಾಂಧಿ ಕುಟುಂಬದ ಬಗ್ಗೆ ತಪ್ಪು ಭಾವನೆ ಮೂಡಿಸಲಾಗಿದೆ” ಎಂದು ಕಿಡಿಕಾರಿದರು.

“ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆ” ಎಂದು ಶ್ಲಾಘಿಸಿದ ಹೆಬ್ಬಾಳ್ಕರ್, “ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರು 9 ವರ್ಷ ಜೈಲಿನಲ್ಲಿದ್ದರು. ದೇಶದ ಮೊದಲ ಬಜೆಟ್ ಮಂಡಿಸಿದ್ದು ನೆಹರೂ. ದೇಶದ ಅಭಿವೃದ್ಧಿಗೋಸ್ಕರ ನೆಹರೂ ಅವರು ತಮ್ಮ ಬಂಗಲೆಯನ್ನು ಬಿಟ್ಟುಕೊಟ್ಟಿದ್ದಾರೆ” ಎಂದು ಹಾಡಿ ಹೊಗಳಿದರು.

ಯುವಕರಿಗೆ ರಾಜಕೀಯ ಪಾಠ

“ಚುನಾವಣೆ ಮಾತ್ರ ನಮ್ಮ ರಾಜಕೀಯ ಗುರಿಯಾಗಿರಬಾರದು. ಒಂದು ಸ್ಪಷ್ಟ ಗುರಿಯನ್ನು ಇಟ್ಟುಕೊಂಡು ರಾಜಕೀಯಕ್ಕೆ ಬರಬೇಕು. ನಿಮ್ಮ ಊರಿನಲ್ಲಿ ನಿಮ್ಮ ಹಿಡಿತವಿದ್ದರೆ ನಾಯಕರು ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ” ಎಂದು ಯುವಕರಿಗೆ ಹೆಬ್ಬಾಳ್ಕರ್ ಸಲಹೆ ನೀಡಿದರು. “50 ವರ್ಷದಿಂದಲೂ ಆರ್‌ಎಸ್‌ಎಸ್‌ ಕಚೇರಿ ಮುಂದೆ ಭಾರತದ ಧ್ವಜ ಇರಲಿಲ್ಲ” ಎಂದು ಸಹ ಅವರು ಉಲ್ಲೇಖಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.