spot_img

ತಾಲೂಕು ಭಜನಾ ಪರಿಷತ್ತನ್ನು ವಲಯ ಮಟ್ಟದಿಂದ ಸದೃಢಗೊಳಿಸಲು ರಾಜೇಂದ್ರ ಕುಮಾರ್ ಬಸ್ರೂರು ಕರೆ

Date:

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆ

ಏಕಾಗ್ರತೆ, ಮಾನಸಿಕ ದೃಢತೆ ಹಾಗೂ ಆತ್ಮವಿಶ್ವಾಸದ ವೃದ್ಧಿಯ ಜೊತೆಗೆ ಭಗವಂತನ ಸಾಕ್ಷಾತ್ಕಾರವನ್ನು ಕಂಡುಕೊಳ್ಳಲು ಇರುವ ಸುಲಭ ದಾರಿ ಭಜನೆ. ಇಂದು ಭಜನೆಯತ್ತ ಯುವ ಸಮುದಾಯದ ಸಹಿತ ಎಲ್ಲಾ ವರ್ಗದ ಜನತೆ ಆಕರ್ಷಿತರಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ವಲಯಗಳ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಭಜನಾ ಮಂಡಳಿಗಳನ್ನು ಸಂಘಟಿಸುವ ಮೂಲಕ ಭಜನಾ ಪರಿಷತ್ತನ್ನು ಇನ್ನಷ್ಟು ಸದೃಢವಾಗಿ ಬೆಳೆಸಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಹೇಳಿದರು.

ಅವರು ಶ್ರೀ ಕ್ಷೇ.ಧ. ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಗತಿ ಸೌಧದಲ್ಲಿ ಭಜನಾ ಪರಿಷತ್ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ದಾಸವರೇಣ್ಯರು ರಚಿಸಿರುವ ಅರ್ಥಗರ್ಭಿತ ಭಜನೆಗಳನ್ನು ಅರ್ಥೈಸಿಕೊಂಡು ಹಾಡಿದಾಗ ಅದರಲ್ಲಿ ಅಡಕವಾಗಿರುವ ಜೀವನ ಮೌಲ್ಯಗಳ ಸಾರವನ್ನು ಅರಿಯಲು ಸಾಧ್ಯ ಎಂದ ಅವರು ಉಡುಪಿ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಭಜನಾ ಪರಿಷತ್ ಸಹಯೋಗದಲ್ಲಿ ರಾಜಾಂಗಣದಲ್ಲಿ 2 ಬಾರಿ ನಡೆದ ಯಶಸ್ವೀ ಸಹಸ್ರ ಕಂಠ ಗಾಯನದ ತರಬೇತಿಯೊಂದಿಗೆ ನೇತೃತ್ವವನ್ನು ವಹಿಸಿರುವ ವಿದುಷಿ ಉಷಾ ಹೆಬ್ಬಾರ್ ಮಣಿಪಾಲ ಅವರು ಭಜನಾ ಪರಿಷತ್ತಿನ ಕೇಂದ್ರ ಸಮಿತಿಯಿಂದ ಭಜನಾ ತರಬೇತುದಾರರಾಗಿ ನಿಯುಕ್ತಿಗೊಂಡಿರುವ ಬಗ್ಗೆ ಅಭಿನಂದನೆಯನ್ನು ಸಲ್ಲಿಸಿದರು.

ಭಜನಾ ತರಬೇತುದಾರೆ ವಿದುಷಿ ಉಷಾ ಹೆಬ್ಬಾರ್ ಮಾತನಾಡಿ, ಮುಂದೆ ನಡೆಯಲಿರುವ ವಿಶೇಷ ಕಾರ್ಯಕ್ರಮದ ಪ್ರಯುಕ್ತ ವಲಯಗಳ ಮಟ್ಟದಲ್ಲಿ ಭಜನಾ ತರಬೇತಿ ನಡೆಯಲಿದ್ದು ಭಜಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದರು.

ಭಜನಾ ಪರಿಷತ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಮಾತನಾಡಿ ತಾಲೂಕು ಭಜನಾ ಪರಿಷತ್ ಸಹಯೋಗದೊಂದಿಗೆ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ನಡೆದ ವಿಜಯದಾಸರ ಆರಾಧನೆ, ಪುರಂದರದಾಸರ ಆರಾಧನೆ ಪ್ರಯುಕ್ತ ನಡೆದ ಸಹಸ್ರ ಕಂಠ ಗಾಯನ, ಸಪ್ತೋತ್ಸವದ ಅಂಗವಾಗಿ ರಥಬೀದಿಯಲ್ಲಿ ನಡೆದ ವಿಶೇಷ ಕುಣಿತದ ಭಜನೋತ್ಸವ ಸಹಿತ ಇನ್ನಿತರ ವಿಶೇಷ ಕಾರ್ಯಕ್ರಮಗಳ ವಿವರಗಳನ್ನು ನೀಡಿ ಮುಂದೆ ನಡೆಯಲಿರುವ ವಲಯ ಮಟ್ಟದ ಸಭೆ ಹಾಗೂ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಶ್ರೀ ಕ್ಷೇ.ಧ. ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಮ್. ಹಾಗೂ ಭಜನಾ ಪರಿಷತ್ ವಲಯಗಳ ಸಂಯೋಜಕರು ಉಪಸ್ಥಿತರಿದ್ದರು.

ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಮುದ್ರಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭಜನಾ ಪರಿಷತ್ ಕೋಶಾಧಿಕಾರಿ ಪೂರ್ಣಿಮಾ ಪೆರ್ಡೂರು ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.