
ಕಾರ್ಕಳ: ಕೊಳಕೆ ಇರ್ವತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಹಾಸಭೆಯು ಇತ್ತೀಚೆಗೆ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ವರ್ಷ 23ನೇ ಸಾರ್ವಜನಿಕ ಗಣೇಶೋತ್ಸವವನ್ನು ಕೊಳಕೆ ಇರ್ವತ್ತೂರು ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಆಚರಿಸಲು ಸಿದ್ಧತೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಸಮಿತಿಗೆ ನೂತನ ಅಧ್ಯಕ್ಷರಾಗಿ ರಾಜೇಂದ್ರ ಪೂಜಾರಿ ಮತ್ತು ಕಾರ್ಯದರ್ಶಿಯಾಗಿ ಪ್ರಸಾದ್ ದೇವಾಡಿಗ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಇದೇ ವೇಳೆ, ಸಮಿತಿಗೆ ಗೌರವಾಧ್ಯಕ್ಷರಾಗಿ ಊರಿನ ಪ್ರಮುಖರಾದ ಜಯಕೀರ್ತಿ ಕಡಂಬ, ಡಾ. ಐ. ಜಿ. ಭಟ್, ಭಾಸ್ಕರ್ ಕೋಟ್ಯಾನ್ ಹಾಗೂ ಕೋಶಾಧಿಕಾರಿಯಾಗಿ ಮಿಥುನ್ ಪೂಜಾರಿ ಮತ್ತು ಕಾರ್ಯಕಾರಿ ಸದಸ್ಯರನ್ನು ಸಹ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಊರಿನ ಹಲವು ಪ್ರಮುಖರು ಉಪಸ್ಥಿತರಿದ್ದರು.