
ಕಾರ್ಕಳ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಸೋಮವಾರ ರಕ್ಷಾ ಬಂಧನ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ರಾಖಿ ಕಟ್ಟಿ ಶುಭ ಹಾರೈಸಲಾಯಿತು.

ರಕ್ಷಾ ಬಂಧನ ಅಂಗವಾಗಿ ತಹಶೀಲ್ದಾರ್ ಮತ್ತು ತಾಲೂಕು ಆಫೀಸ್ ಸಿಬ್ಬಂದಿಗಳಿಗೆ, ನಗರ ಪೊಲೀಸ್ ಠಾಣೆ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಗಳಿಗೆ, ಸಮಾಜ ಕಲ್ಯಾಣ ಇಲಾಖೆಯವರಿಗೆ ಮತ್ತು ನಗರದ ವರ್ತಕರಿಗೆ ಬ್ರಹ್ಮಕುಮಾರಿ ಕೇಂದ್ರದ ಸದಸ್ಯರು ರಾಖಿ ಕಟ್ಟಿದರು. ಈ ಕಾರ್ಯಕ್ರಮವು ಸಮಾಜದ ವಿವಿಧ ವರ್ಗಗಳ ನಡುವೆ ಪ್ರೀತಿ, ಭ್ರಾತೃತ್ವ ಮತ್ತು ಸೌಹಾರ್ದತೆಯನ್ನು ಹೆಚ್ಚಿಸುವ ಪ್ರಯತ್ನವಾಗಿತ್ತು.
