spot_img

ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನ ನೂತನ ಪಿ.ಆರ್.ಒ ಆಗಿ ರಾಮಚಂದ್ರ ನೆಲ್ಲಿಕಾರು ನೇಮಕ

Date:

ಮಣಿಪಾಲ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಸಹಭಾಗಿತ್ವದಲ್ಲಿರುವ ಮಣಿಪಾಲ್ ಹೈಸ್ಕೂಲ್ ಟ್ರಸ್ಟ್‌ನ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿ.ಆರ್.ಒ)ಯಾಗಿ ಶ್ರೀ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಅನುಭವ ಹೊಂದಿರುವ ಇವರು ಕಳೆದ 12 ವರ್ಷಗಳಿಂದ ಪ್ರಾಂಶುಪಾಲರಾಗಿ, ಆಂಗ್ಲಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವಿ, ಖ್ಯಾತ ವಾಗ್ನಿಯಾಗಿರುವ ಶ್ರೀಯುತರು 2ಸಾವಿರಕ್ಕೂ ಅಧಿಕ ಅನೇಕ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಭಾಷಣಕಾರರಾಗಿ, ರಾಜ್ಯಮಟ್ಟದಲ್ಲಿ ನಡೆದ ಎನ್.ಎಸ್.ಎಸ್ ಶಿಬಿರದಲ್ಲಿ ಮೂರು ಬಾರಿ ಸಂಪನ್ಮೂಲ ವ್ಯಕಿಯಾಗಿ ಹಾಗೂ 300ಕ್ಕೂ ಅಧಿಕ ಎನ್.ಎಸ್.ಎಸ್ ಶಿಬಿರದಲ್ಲಿ ಉಪನ್ಯಾಸಕರಾಗಿಯೂ ಜನಪ್ರಿಯರಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿಯೇ ಮೂಡಬಿದ್ರಿಯ ದವಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ, ತದನಂತರ ವೃತ್ತಿ ಬದುಕಿನಲ್ಲಿ ಕಾರ್ಕಳ-ನಾರಾವಿ ದೇವಾಡಿಗ ಸಂಘದ ಕಾರ್ಯದರ್ಶಿಯಾಗಿ, ಕಾರ್ಕಳದ ಜೆ.ಸಿ.ಐನ ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿಯೂ ಸೇವೆಸಲ್ಲಿಸಿದ ಹೆಗ್ಗಳಿಕೆ ಇವರದ್ದು. ವೃತ್ತಿಯಲ್ಲಿ ಉಪನ್ಯಾಸಕನಾಗಿದ್ದರೂ, ಪ್ರವೃತ್ತಿಯಲ್ಲಿ ರಂಗಭೂಮಿ ಕ್ಷೇತ್ರದಲ್ಲಿ 300ಕ್ಕೂ ಅಧಿಕ ನಾಟಕಗಳಲ್ಲಿ ಕಲಾವಿದರಾಗಿಯೂ ಜೊತೆಗೆ 8 ತುಳು ನಾಟಕಗಳನ್ನು ಬರೆದು ಕಲಾರಸಿಕರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ.

ವಿದ್ಯಾನಗರದ ಮಣಿಪಾಲ್ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯನಿರತ ದಿನಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಶಿಕ್ಷಣಾರ್ಥಿಗಳ ಭೇಟಿಗೆ ಲಭ್ಯವಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.