
ರಾಮನಗರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್)ದ ರಾಮನಗರ ಘಟಕದ ವತಿಯಿಂದ ವರಮಹಾಲಕ್ಷ್ಮಿ ಪೂಜೆಯನ್ನು ಜಿಲ್ಲಾ ಕಚೇರಿಯಲ್ಲಿ ಭವ್ಯವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರು ಜಯಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು.
ಈ ಪೂಜೆಯಲ್ಲಿ ಯೋಜನೆಯ ಅಧಿಕಾರಿಗಳು, ಸಿಬ್ಬಂದಿ ಮತ್ತು ಸ್ಥಳೀಯ ಗಣ್ಯರು ಭಾಗವಹಿಸಿದ್ದರು.
ಪೂಜೆಯ ನಂತರ, ಭಾಗವಹಿಸಿದ ಎಲ್ಲರಿಗೆ ಪ್ರಸಾದ ವಿತರಣೆ ಮಾಡಲಾಯಿತು.
