
ಉಡುಪಿ : ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸಕ್ರಿಯ ಸದಸ್ಯರಾಗಿರುವ ಶ್ರೀ ರಂಜಿತ್ ಪ್ರಭು ಅವರನ್ನು ರಾಜ್ಯ ಸರ್ಕಾರವು ಉಡುಪಿ ಜಿಲ್ಲಾ ಕಾರಾಗೃಹದ ಸಂದರ್ಶಕರ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ನಾಮನಿರ್ದೇಶನ ಮಾಡಿದೆ.
ಸಮಾಜ ಸೇವಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ರಂಜಿತ್ ಪ್ರಭು ಅವರ ಈ ನೇಮಕಾತಿಯು ಇನ್ನಷ್ಟು ಉತ್ತಮ ಸೇವೆ ಸಲ್ಲಿಸಲು ಅವಕಾಶ ನೀಡಲಿದೆ. ಅವರಿಗೆ ಪೆರ್ಡೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.