ಸಲ್ಮಾನ್ ಖಾನ್ – ಅಟ್ಲಿ ಜೋಡಿಗೆ ರಶ್ಮಿಕಾ ಮಂದಣ್ಣ? ಬಾಲಿವುಡ್‌ನಲ್ಲಿ ಮತ್ತೊಂದು ಸೆನ್ಸೇಷನ್!

Date:

spot_img

ದಕ್ಷಿಣದ ಜನಪ್ರಿಯ ನಿರ್ದೇಶಕ ಅಟ್ಲಿ ಕುಮಾರ್ ಬಾಲಿವುಡ್‌ನಲ್ಲಿ ಮತ್ತೊಂದು ದೊಡ್ಡ ಪ್ರಾಜೆಕ್ಟ್ ಕೈಗೊಳ್ಳಲು ಸಜ್ಜಾಗಿದ್ದಾರೆ. ‘ಜವಾನ್’ ಮೂಲಕ ಶಾರುಖ್ ಖಾನ್ ಜತೆ ಬಿಗ್ ಹಿಟ್ ನೀಡಿದ ಅವರು, ಈ ಬಾರಿ ಸಲ್ಮಾನ್ ಖಾನ್ ಜತೆ ಚಿತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಕೆಲವು ದಿನಗಳಿಂದ ಊಹಾಪೋಹಗಳು ಕೇಳಿಬರುತ್ತಿದ್ದರೆ, ಈಗ ಚಿತ್ರದಲ್ಲಿ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ದೊರಕಿದೆ.

‘ಕಿರಿಕ್ ಪಾರ್ಟಿ’ ಮೂಲಕ ಎಂಟ್ರಿ ಕೊಟ್ಟು, ”ಪುಷ್ಪ’ದಂತಹ ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿ, ಪ್ಯಾನ್ ಇಂಡಿಯಾ ಮಟ್ಟದ ನಟಿಯಾಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಈ ಚಿತ್ರದಲ್ಲಿ ಹೀರೋಯಿನ್ ಆಗಲಿದ್ದಾರೆ ಎಂದು ‘ಫಿಲ್ಮ್ ಫೇರ್’ ವರದಿ ಮಾಡಿದೆ. ಶೀಘ್ರದಲ್ಲೇ ರಶ್ಮಿಕಾ ಚಿತ್ರಕ್ಕೆ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಈ ಚಿತ್ರದಲ್ಲಿ ಸಲ್ಮಾನ್ ಜತೆ ರಜನಿಕಾಂತ್ ಅಥವಾ ಕಮಲ್ ಹಾಸನ್ ಕೂಡ ಕಾಣಿಸಿಕೊಳ್ಳಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಅದೃಷ್ಟವಶಾತ್, ರಶ್ಮಿಕಾ ಈಗಾಗಲೇ ‘ಸಿಕಂದರ್’ ಚಿತ್ರದಲ್ಲಿ ಸಲ್ಮಾನ್ ಜತೆ ಜೋಡಿಯಾಗಿದ್ದಾರೆ. ಈಗ ಮತ್ತೊಂದು ಚಿತ್ರಕ್ಕೂ ಅವರ ಜೋಡಿಯಾಗಿದೆ ಎಂಬ ಸುದ್ದಿ ಬಾಲಿವುಡ್‌ನಲ್ಲಿ ಹೊಸ ಸಂಚಲನ ಮೂಡಿಸಿದೆ!

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜಯರಾಮ ಬನಾನ ಸಾಧನೆಗೆ ಕೋಟ ಪೂಜಾರಿ ಮೆಚ್ಚುಗೆ

ಉದ್ಯಮಿ ಜಯರಾಮ ಬನಾನ ಸಾಧನೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೊಂಡಾಡಿದ್ದು, ಮೋದಿ ಸರ್ಕಾರದ ಸಾಧನಾ ಪುಸ್ತಕ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ರೋಟರಿ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಧರ್ಮಸ್ಥಳ ಯೋಜನೆಯಿಂದ ಉಚಿತ ಹೊಲಿಗೆ ತರಬೇತಿ ಚಾಲನೆ

ಉಡುಪಿಯ ಬೊಮ್ಮರಬೆಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3 ತಿಂಗಳ ಉಚಿತ ಹೊಲಿಗೆ ತರಬೇತಿಗೆ ಚಾಲನೆ ಸಿಕ್ಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಮಹಿಳೆಯರಿಗೆ ಸರ್ಕಾರಿ ಇಲಾಖೆಗಳ ಅಧ್ಯಯನ ಪ್ರವಾಸ

ಉಡುಪಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶೈಕ್ಷಣಿಕ ಹಾಗೂ ಜಾಗೃತಿ ಅಧ್ಯಯನ ಪ್ರವಾಸ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ