ಆರ್‌ಸಿಬಿ ವಿಜಯೋತ್ಸವ ದುರಂತ: ಕಾಲ್ತುಳಿತದಲ್ಲಿ 11 ಅಭಿಮಾನಿಗಳ ಸಾವು – ವಿರಾಟ್ ಕೊಹ್ಲಿ ಹಾಗೂ ಆರ್‌ಸಿಬಿಯಿಂದ ಸಂತಾಪ

Date:

spot_img

ಬೆಂಗಳೂರು : ಐಪಿಎಲ್ 2025 ಟ್ರೋಫಿ ಗೆದ್ದುಕೊಂಡ ಆರ್‌ಸಿಬಿ ತಂಡದ ವಿಜಯೋತ್ಸವದ ಪ್ರಯುಕ್ತ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ದುರ್ಮರಣಕ್ಕೀಡಾಗಿದ್ದಾರೆ. ಹಲವರು ಗಾಯಗೊಂಡಿದ್ದು, ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರ್‌ಸಿಬಿ ತಂಡದ ಆಟಗಾರರು ಹಾಗೂ ನಿರ್ವಹಣಾ ಸಿಬ್ಬಂದಿ ಭಾಗವಹಿಸುವ ಸಮಾರಂಭವನ್ನು ವೀಕ್ಷಿಸಲು ಸಾವಿರಾರು ಅಭಿಮಾನಿಗಳು ಚಿನ್ನಸ್ವಾಮಿ ಮೈದಾನದ ಹೊರಗಡೆ ಜಮಾಯಿಸಿದ್ದರು. ಈ ವೇಳೆ ಜನಸಂದಣಿಯಿಂದ ನಿಯಂತ್ರಣ ತಪ್ಪಿ ಕಾಲ್ತುಳಿತ ಉಂಟಾಗಿ ಅನಾಹುತ ಸಂಭವಿಸಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಆರ್‌ಸಿಬಿ ತಾರೆ ವಿರಾಟ್ ಕೊಹ್ಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಶೋಕದ ಭಾವನೆ ಹಂಚಿಕೊಂಡಿದ್ದು, “ಈ ದುಃಖದ ಸುದ್ದಿ ಕೇಳಿ ನಾನು ಶಬ್ದವಿಲ್ಲದವನಾಗಿದ್ದೇನೆ. ಹೃದಯ ಒಡೆದುಹೋಗಿದೆ” ಎಂದು ಬರೆದುಕೊಂಡಿದ್ದಾರೆ.

ಆರ್‌ಸಿಬಿ ಫ್ರಾಂಚೈಸಿಯೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ನಮ್ಮ ಆಟಗಾರರ ಆಗಮನದ ನಿರೀಕ್ಷೆಯಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಆದರೆ ಅದೇ ವೇಳೆ ಈ ಅನಾಹುತ ಸಂಭವಿಸಿದ ವಿಚಾರ ನಮಗೆ ಬಹಳ ದುಃಖ ತಂದಿದೆ. ಪ್ರತಿಯೊಬ್ಬ ಅಭಿಮಾನಿಯ ಸುರಕ್ಷತೆ ನಮಗೆ ಅತ್ಯಂತ ಮುಖ್ಯ. ಈ ಘಟನೆಗೆ ಸಂಬಂಧಿಸಿದಂತೆ ತಕ್ಷಣವೇ ಕಾರ್ಯಕ್ರಮದ ವೇಳಾಪಟ್ಟಿಯನ್ನು ಬದಲಾಯಿಸಲಾಗಿದ್ದು, ಸ್ಥಳೀಯ ಅಧಿಕಾರಿಗಳ ಮಾರ್ಗದರ್ಶನದಂತೆ ಮುಂದಿನ ಕ್ರಮ ಕೈಗೊಂಡಿದ್ದೇವೆ” ಎಂದು ತಿಳಿಸಿದೆ.

ಸಂತ್ರಸ್ತರ ಕುಟುಂಬಗಳಿಗೆ ಆರ್‌ಸಿಬಿ ಸಂತಾಪ ಸೂಚಿಸಿದ್ದು, ಗಾಯಗೊಂಡವರ ಸ್ವಸ್ಥತೆಗೆ ಪ್ರಾರ್ಥನೆ ಸಲ್ಲಿಸಲಾಗಿದೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ