spot_img

ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಸಚಿವರಿಂದ ಮುನ್ನೆಚ್ಚರಿಕಾ ಕ್ರಮಗಳಿಗೆ ಜಿಲ್ಲಾಡಳಿತಕ್ಕೆ ಸೂಚನೆ

Date:

spot_img

ಉಡುಪಿ: ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಹಲವಾರು ದಿನಗಳಿಂದ ಮುಂದುವರೆದ ಧಾರಾಕಾರ ಮಳೆಯ ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಪರಿಸ್ಥಿತಿಯ ಗಂಭೀರತೆಗೆ ತಕ್ಕಂತೆ ಭಾರತೀಯ ಹವಾಮಾನ ಇಲಾಖೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಭಾರೀ ಮಳೆಯ ಪರಿಣಾಮವಾಗಿ ಉಂಟಾಗಬಹುದಾದ ನಷ್ಟವನ್ನು ತಡೆಯುವ ಉದ್ದೇಶದಿಂದ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಜಿಲ್ಲಾಡಳಿತದೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣದಿಂದ ಜಾರಿಗೆ ತರುವಂತೆ ಸೂಚಿಸಿದ್ದಾರೆ.

ಮುಖ್ಯ ಸೂಚನೆಗಳು:

  • ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಇರುವ ನದಿ ಹಾಗೂ ಸಮುದ್ರ ತೀರ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸುವುದು
  • ತುರ್ತು ಪರಿಸ್ಥಿತಿಗೆ ಸ್ಪಂದಿಸಲು 24×7 ಸಹಾಯವಾಣಿ ಸ್ಥಾಪನೆ
  • ಪ್ರವಾಸಿ ತಾಣಗಳಲ್ಲಿ ಅಪಾಯಕರ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸುವುದು
  • ಅಗತ್ಯವಿದ್ದಲ್ಲಿ ನದಿ-ಸಮುದ್ರದ ಬಳಿಯಲ್ಲಿ ವಾಸಿಸುತ್ತಿರುವವರ ಸ್ಥಳಾಂತರ
  • ತಾತ್ಕಾಲಿಕ ಕಾಳಜಿ ಕೇಂದ್ರಗಳ ಸ್ಥಾಪನೆ

ಮುಂಬರುವ ಮೂರು ದಿನಗಳವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಸಲಹೆ ನೀಡಲಾಗಿದೆ. ಪ್ರವಾಸಿಗರು ನದಿಗಳ ತೀರ, ಸಮುದ್ರದ ತಟ ಪ್ರದೇಶಗಳಿಗೆ ತೆರಳದಂತೆ ಇಲಾಖೆಗಳು ಸೂಚನೆ ನೀಡಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಷ್ಯಾ-ಭಾರತ ಆರ್ಥಿಕತೆ ನಾಶವಾಗಲಿ ಎಂದ ಟ್ರಂಪ್; ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಕ್ಕೆ ಅಮೆರಿಕದಲ್ಲಿ ಅಸಮಾಧಾನ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ಭಾರತ ಮತ್ತು ರಷ್ಯಾವನ್ನು "ಸತ್ತ ಆರ್ಥಿಕತೆಗಳು" ಎಂದು ಜರೆದಿದ್ದಾರೆ.

ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ: ಮಳೆಹಾನಿ ರಸ್ತೆಗಳ ತಕ್ಷಣ ದುರಸ್ತಿ, ಕಡಲಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ರೋಹಿಣಿ ಸಿಂಧೂರಿ ಸೂಚನೆ

ಉಡುಪಿ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಪ್ರಾಕೃತಿಕ ವಿಕೋಪ ಮತ್ತು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣ : 15 ವರ್ಷಗಳ UDR ದಾಖಲೆ ನಾಶ; ಪೊಲೀಸರ ವಿರುದ್ಧ ವ್ಯಾಪಕ ಟೀಕೆ

ಧರ್ಮಸ್ಥಳದಲ್ಲಿ 2000ದಿಂದ 2015ರ ಅವಧಿಯಲ್ಲಿ ದಾಖಲಾಗಿದ್ದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳು (UDR - Unidentified Death Report) ಡಿಲೀಟ್ ಆಗಿರುವುದು ಬೆಳಕಿಗೆ ಬಂದಿದೆ.

ಕಾರ್ಕಳ ಜ್ಞಾನಸುಧಾ : ಎನ್.ಎಸ್.ಎಸ್ ಕಾರ್ಯಚಟುವಟಿಕೆಗಳ ಉದ್ಘಾಟನೆ

ಎನ್.ಎಸ್.ಎಸ್ ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂ ಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಎಂ ಮಾತನಾಡಿದರು.