ಸಿಎಂ, ಡಿಸಿಎಂ ಹೆಸರಿನಲ್ಲಿ ಶ್ರೀಮಂತ ಮಹಿಳೆಯರಿಗೆ 30 ಕೋಟಿ ವಂಚನೆ

Date:

spot_img

ಬೆಂಗಳೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇತರ ಪ್ರಭಾವಿ ನಾಯಕರ ಹೆಸರುಗಳನ್ನು ದುರ್ಬಳಕೆ ಮಾಡಿಕೊಂಡು, ಶ್ರೀಮಂತ ಕುಟುಂಬದ ಸುಮಾರು 20 ಮಹಿಳೆಯರಿಗೆ 30 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಮುಖ ಆರೋಪಿ ಸವಿತಾ ಮತ್ತು ಆಕೆಯ ಪರಿಚಯಸ್ಥ ಪುನೀತ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಹೆಚ್‌ವಿಕೆ ಗಾರ್ಡನ್ ನಿವಾಸಿ ಸವಿತಾ, ಕಿಟ್ಟಿ ಪಾರ್ಟಿಗಳಲ್ಲಿ ಪರಿಚಯವಾದ ಶ್ರೀಮಂತ ಸ್ನೇಹಿತೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಹಾಗೂ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರ ಹೆಸರುಗಳನ್ನು ಬಳಸಿಕೊಂಡು ವಂಚನೆ ಎಸಗಿದ್ದಾಳೆ.

ವಿದೇಶದಿಂದ ಕಡಿಮೆ ಬೆಲೆಗೆ ಚಿನ್ನ ತರಿಸುವ ಆಮಿಷವೊಡ್ಡಿ, ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಸವಿತಾ ಶ್ರೀಮಂತ ಕುಟುಂಬದ ಮಹಿಳೆಯರ ಮನವೊಲಿಸಿ ಮೋಸ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

ಸವಿತಾ ವಿರುದ್ಧ ಈ ಹಿಂದೆಯೂ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ 85 ಲಕ್ಷ ರೂಪಾಯಿ ಹಾಗೂ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ 2.50 ಕೋಟಿ ರೂಪಾಯಿ ವಂಚನೆ ಪ್ರಕರಣಗಳು ದಾಖಲಾಗಿದ್ದವು. ಪ್ರಸ್ತುತ ತನಿಖೆಯಲ್ಲಿ ವಂಚನೆಯ ಮೊತ್ತ ಅಂದಾಜು 30 ಕೋಟಿ ರೂಪಾಯಿ ದಾಟಿದೆ ಎಂದು ಪೊಲೀಸರು ತಿಳಿಸಿದ್ದು, ತನಿಖೆ ಪೂರ್ಣಗೊಂಡ ನಂತರ ನಿಖರ ಮೊತ್ತ ತಿಳಿಯಲಿದೆ ಎಂದು ಹೇಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.