spot_img

ಹೆಚ್ಚುತ್ತಿರುವ ಉಷ್ಣತೆ: ಸಾರ್ವಜನಿಕರಿಗಾಗಿ ಜಿಲ್ಲಾಡಳಿತದ ಮುನ್ನೆಚ್ಚರಿಕೆ ಮಾರ್ಗಸೂಚಿಗಳು

Date:

ಉಡುಪಿ : ಬೇಸಿಗೆ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿ ಶಾಖದ ಹೊಡೆತ (Heat Wave) ಸಮಸ್ಯೆಯ ಆತಂಕ ಹೆಚ್ಚಾಗಿದೆ. ಸಾರ್ವಜನಿಕರ ಆರೋಗ್ಯಕ್ಕೆ ಹಾನಿ ಉಂಟಾಗುವ ಸಂಭವ ಇರುವುದರಿಂದ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಕಟಿಸಿದೆ.

ಶಾಖದ ಹೊಡೆತದಿಂದ ಹೇಗೆ ತಯಾರಾಗಬೇಕು?
➡ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿಗೆ ಹೋಗುವುದು ತಪ್ಪಿಸಿ.
➡ ಸಾಕಷ್ಟು ನೀರು ಕುಡಿಯುವುದು; ಬಾಯಾರಿಕೆ ಇಲ್ಲದಿದ್ದರೂ ನೀರು ಸೇವಿಸಬೇಕು.
➡ ಹಗುರವಾದ, ಸಡಿಲ, ತಿಳಿ ಬಣ್ಣದ ಹತ್ತಿ ಬಟ್ಟೆ ಧರಿಸಬೇಕು.
➡ ಬಿಸಿಲಿಗೆ ಹೋಗುವಾಗ ಟೋಪಿ, ಛತ್ರಿ, ಬೂಟು ಅಥವಾ ಚಪ್ಪಲ್ ಬಳಸಬೇಕು.
➡ ಶ್ರಮದಾಯಕ ಚಟುವಟಿಕೆಗಳನ್ನು ಬಿಸಿಲಿನಲ್ಲಿ ಮಾಡುವುದು ತಪ್ಪಿಸಬೇಕು.

ಎಲ್ಲರಿಗೂ ಮುಖ್ಯವಾದ ಮುನ್ನೆಚ್ಚರಿಕೆಗಳು
✔ ಆಲ್ಕೊಹಾಲ್, ಚಹಾ, ಕಾಫಿ, ಕಾರ್ಬೋನೇಟೆಡ್ ಪಾನೀಯಗಳನ್ನು
ಮಿತಿಯಾಗಿ ಬಳಸಬೇಕು.
✔ ಹಳೆಯ ಆಹಾರ ಸೇವನೆ ತಪ್ಪಿಸಿ, ಹೆಚ್ಚು ಪ್ರೋಟೀನ್ ಇರುವ ಆಹಾರವನ್ನು
ಸೇವಿಸಬೇಕು.
✔ ಬಿಸಿಲಿಗೆ ಹೆಚ್ಚು ತೆರೆದಿರದಂತೆ ಮುನ್ನೆಚ್ಚರಿಕೆ ವಹಿಸಬೇಕು.
✔ ತಲೆ, ಕುತ್ತಿಗೆ, ಮುಖ, ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆ ಇಡಬಹುದು.
✔ ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು.
✔ ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ಸನ್‌ಸ್ಟ್ರೋಕ್ ಆಗಿದ್ದರೆ ಏನು ಮಾಡಬೇಕು?
➡ ತಕ್ಷಣ ವ್ಯಕ್ತಿಯನ್ನು ತಂಪಾದ ಸ್ಥಳಕ್ಕೆ ಕರೆದೊಯ್ಯಬೇಕು.
➡ ದೇಹವನ್ನು ಒದ್ದೆಯಾದ ಬಟ್ಟೆಯಿಂದ ತೊಳೆಯಬೇಕು, ತಲೆಗೆ ತಣ್ಣೀರಿನ ತೊಳೆಹಾಕಬೇಕು.
➡ ಓ.ಆರ್.ಎಸ್, ನಿಂಬೆ ಹಣ್ಣು ನೀರು, ತೋರಣಿ, ಮಜ್ಜಿಗೆ ಸೇವಿಸಲು ನೀಡಬೇಕು.
➡ ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯಲು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು.

ಮತ್ತು ಇತರ ಮುನ್ನೆಚ್ಚರಿಕೆಗಳು
✔ ಪ್ರಾಣಿಗಳಿಗೆ ನೆರಳಿನಲ್ಲಿ ಇರಿಸಿ, ನೀರು ಕೊಡಿ.
✔ ಮನೆಯನ್ನು ತಂಪಾಗಿರಿಸಲು ಪರದೆ, ಶಟರ್‌ಗಳನ್ನು ಬಳಸಿರಿ.
✔ ತಣ್ಣೀರಿನಲ್ಲಿ ಸ್ನಾನ ಮಾಡಿ, ಫ್ಯಾನ್ ಅಥವಾ ಒದ್ದೆಯಾದ ಬಟ್ಟೆ ಬಳಸಿ.
✔ ತಂಪಾದ ವಾತಾವರಣದಿಂದ ಬಿಸಿಲಿಗೆ ಬರುವವರು ಕ್ರಮೇಣ ಹೊಂದಿಕೊಳ್ಳಬೇಕು.

ತುರ್ತು ಸೇವೆಗಾಗಿ 1077 ಅಥವಾ 0820-2574802 ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.