
ಕಾರ್ಕಳ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋಪರೇಟಿವ್ ಲಿಮಿಟೆಡ್‌ನ ಕಾರ್ಕಳ ಶಾಖೆಯ ವತಿಯಿಂದ, ವಿಜೇತ ವಿಶೇಷ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಉದ್ಯಮಿಗಳು ಮತ್ತು ಬಂಟ್ಸ್ ಕ್ರೆಡಿಟ್ ಕೋಪರೇಟಿವ್ ಸೊಸೈಟಿ ಅಧ್ಯಕ್ಷರು , ರಾಜಕೀಯ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು ಹಾಗೂ ಭುವನೇಂದ್ರ ಹೈಸ್ಕೂಲ್ ಪ್ರಾಧ್ಯಾಪಕರು , ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ, ಸ್ಕೌಟ್ & ಗೈಡ್ಸ್ ಕಾರ್ಕಳ ವಲಯದ ಕಾರ್ಯದರ್ಶಿ ಗಣೇಶ್ ಜಾಲ್ಸುರ್ ಇವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಬೆಡ್ ಶೀಟ್, ಟವೆಲ್ ಹಾಗೂ ತಂಪು ಪಾನೀಯ ವಸ್ತುಗಳನ್ನು ಹಸ್ತಾಂತರಿಸಿದರು.

ಸೈoಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋಪರೇಟಿವ್ ಲಿಮಿಟೆಡ್ ಕಾರ್ಕಳ ಬ್ರಾಂಚ್ ಮ್ಯಾನೇಜರ್ ಕಿಶೋರ್ ದೇವಾಡಿಗ , ಉಡುಪಿ & ಮಂಗಳೂರು ವಿಭಾಗ ಅಭಿವೃದ್ಧಿ ವ್ಯವಸ್ಥಾಪಕರಾದ ಮನೀಶ್, ಉಡುಪಿ & ಮಂಗಳೂರು ವಿಭಾಗ ಸಾಲ ವಸೂಲಾತಿ ಅಧಿಕಾರಿ ಗೌತಮ್ ರೈ , ವಿಜೇತ ವಿಶೇಷ ಶಾಲಾ ಸಂಸ್ಥಾಪಕರಾದ ಡಾ.ಕಾಂತಿ ಹರೀಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿಶೇಷ ಶಿಕ್ಷಕಿ ಶ್ರೀಮತಿ ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿ ಡಾ.ಕಾಂತಿ ಹರೀಶ್ ಸ್ವಾಗತಿಸಿ, ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳು ಪ್ರಾರ್ಥನೆಯನ್ನು ನೆರವೇರಿಸಿ, ವಿಶೇಷ ಶಿಕ್ಷಕಿ ಶ್ರೀಮತಿ ಶ್ವೇತಾ ವಂದಿಸಿದರು.