
ನರಸಿಂಗ್‌ಪುರ: ಮಧ್ಯಪ್ರದೇಶ ಸರ್ಕಾರವು ರಾಜ್ಯದ 17 ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲು ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಗುರುವಾರ ಘೋಷಿಸಿದರು.
ನರಸಿಂಗ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಯಾದವ್, “ಮದ್ಯ ಸೇವನೆಯ ದುಷ್ಪರಿಣಾಮಗಳನ್ನು ಎಲ್ಲರೂ ಅರಿತಿರಬೇಕು. ಯುವಕರು ನಮ್ಮ ದೇಶದ ಭವಿಷ್ಯ. ನಾವು ಯುವಕರಿಗೆ ಹಾನಿ ಮಾಡಬಲ್ಲ ಚಟುವಟಿಕೆಗಳಲ್ಲಿ ತೊಡಗಿಸಬಾರದು. ಹೀಗಾಗಿ ಶ್ರೀಕೃಷ್ಣ ಮತ್ತು ಶ್ರೀರಾಮನ ಪವಿತ್ರ ಸ್ಥಳಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು” ಎಂದು ತಿಳಿಸಿದ್ದಾರೆ.
ಈ ನಿರ್ಧಾರವು ಧಾರ್ಮಿಕ ಸ್ಥಳಗಳ ಪವಿತ್ರತೆ ಕಾಪಾಡುವೊದರೊಂದಿಗೆ , ಸಮಾಜದಲ್ಲಿ ಉತ್ತಮ ಪರಿಸರ ನಿರ್ಮಾಣ ಮಾಡಲು ಸಹಾಯವಾಗುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಸರ್ಕಾರದ ಈ ಕ್ರಮ ಜನರಿಂದ ಪ್ರಶಂಸೆಗೆ ಪಾತ್ರವಾಗುತ್ತಿದೆ.