spot_img

ಮರಳು-ಕೆಂಪುಕಲ್ಲು ಸಮಸ್ಯೆ: ಜುಲೈ 14ಕ್ಕೆ ದ.ಕ. ಜಿಲ್ಲೆಯಾದ್ಯಂತ ಬಿಜೆಪಿ ಪ್ರತಿಭಟನೆ

Date:

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲೆದೋರಿರುವ ಕೆಂಪುಕಲ್ಲು (laterite stone) ಮತ್ತು ಮರಳು ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ, ಭಾರತೀಯ ಜನತಾ ಪಕ್ಷವು (ಬಿಜೆಪಿ) ಜುಲೈ 14ರಂದು ಜಿಲ್ಲೆಯ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಘೋಷಿಸಿದ್ದಾರೆ.

ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಮನೆ ಮತ್ತು ಕಟ್ಟಡ ನಿರ್ಮಾಣಕ್ಕೆ ಕೆಂಪುಕಲ್ಲು, ಮರಳು ಲಭ್ಯವಾಗುತ್ತಿಲ್ಲ. ಕಾಮಗಾರಿಗಳು ಅರ್ಧಕ್ಕೆ ನಿಂತಿವೆ, ಇದರಿಂದ ಕಾರ್ಮಿಕರು ಕೆಲಸವಿಲ್ಲದೆ ತೊಂದರೆಗೆ ಸಿಲುಕಿದ್ದಾರೆ. ನಿಯಮಗಳನ್ನು ಸರಳೀಕರಿಸುವುದಾಗಿ ಹೇಳಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ,” ಎಂದು ಆರೋಪಿಸಿದರು.

ಅಕ್ರಮವಾಗಿ ಕೆಂಪುಕಲ್ಲು ಕೋರೆ ಮತ್ತು ಮರಳು ಗಣಿಗಾರಿಕೆ ನಡೆಸುವುದನ್ನು ಬಿಜೆಪಿ ಬೆಂಬಲಿಸುವುದಿಲ್ಲ ಎಂದ ಸತೀಶ್ ಕುಂಪಲ, “ಆದರೆ, ರಾಜ್ಯ ಸರ್ಕಾರ ಅಧಿಕೃತ ಪರವಾನಗಿ ನೀಡುವಲ್ಲಿ ವಿಫಲವಾಗಿದೆ. ಪರವಾನಗಿಗೆ ಅರ್ಜಿ ಸಲ್ಲಿಸಿದ 21 ದಿನಗಳೊಳಗೆ ಅನುಮತಿ ಸಿಗಬೇಕು, ಆದರೆ ಈಗ ಆರು ತಿಂಗಳಾದರೂ ಪರವಾನಗಿ ಸಿಗುತ್ತಿಲ್ಲ. ಕೇರಳದಲ್ಲಿ ಒಂದು ಟನ್ ಕೆಂಪುಕಲ್ಲಿಗೆ ₹332 ತೆರಿಗೆ ಇದ್ದರೆ, ಇಲ್ಲಿ ₹7256 ಇದೆ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ₹191 ತೆರಿಗೆ ನಿಗದಿಪಡಿಸಲಾಗಿತ್ತು. ಶೀಘ್ರವಾಗಿ ಸಿಗದ ಪರವಾನಗಿ ಮತ್ತು ಹೆಚ್ಚಿದ ತೆರಿಗೆ ಮೊತ್ತದಿಂದಾಗಿ ಅನಧಿಕೃತ ಕೋರೆಗಳು ಹೆಚ್ಚಾಗಿವೆ,” ಎಂದು ವಿವರಿಸಿದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, “ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಎರಡು ವರ್ಷಗಳಿಂದ ಮರಳು ತೆಗೆಯಲು ಮರಳು ನೀತಿ ಜಾರಿಗೊಳಿಸಿಲ್ಲ. ಈ ಸಂಬಂಧ ಯಾವುದೇ ಸಭೆಯೂ ನಡೆದಿಲ್ಲ,” ಎಂದರು. ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, “ಮರಳು ವ್ಯವಹಾರದಲ್ಲಿ ರಾಜಕೀಯ ಪುಢಾರಿಗಳು ಮತ್ತು ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೇರಳ ಮಾದರಿಯಲ್ಲಿ ಇಲ್ಲಿಯೂ ಕೆಂಪುಕಲ್ಲು ಅಧಿಕೃತ ಪೂರೈಕೆಗೆ ಅವಕಾಶ ನೀಡಬೇಕು,” ಎಂದು ಒತ್ತಾಯಿಸಿದರು.

ಶಾಸಕ ರಾಜೇಶ್ ನಾಯ್ಕ ಅವರು, “ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಉಪನಿರ್ದೇಶಕರ ಹುದ್ದೆ ಖಾಲಿ ಇದ್ದು, ಹಿರಿಯ ಭೂ ವಿಜ್ಞಾನಿ ಪ್ರಭಾರಿಯಾಗಿದ್ದಾರೆ. ಮರಳು ಹಾಗೂ ಕೆಂಪುಕಲ್ಲು ಸಮಸ್ಯೆ ಬಗ್ಗೆ ಹೇಳಿದರೆ ಯಾವುದೇ ಸ್ಪಂದನೆ ಸಿಗುತ್ತಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ, ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರಿನ ಸಂತ್ರಸ್ತೆಯ ಮನೆಗೆ ಬಿಜೆಪಿ ನಿಯೋಗ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದೆ. “ಯುವತಿ ಹಾಗೂ ಆಕೆಯ ಮಗುವಿಗೆ ನ್ಯಾಯ ಸಿಗಬೇಕು. ಆರೋಪಿ ಕೃಷ್ಣ ರಾವ್ ಅವರ ತಂದೆ ಜಗನ್ನಿವಾಸ ರಾವ್ ಅವರಿಗೆ ಪಕ್ಷದಿಂದ ನೋಟಿಸ್ ಜಾರಿಗೊಳಿಸಲಾಗಿದ್ದು, ಉತ್ತರ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಸತೀಶ್ ಕುಂಪಲ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಹರೀಶ್ ಪೂಂಜ, ಭಾಗೀರಥಿ ಮುರುಳ್ಯ ಹಾಗೂ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಮಂಜುಳಾ ರಾವ್, ಸಂಜಯ ಪ್ರಭು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಿರ್ವದ ಪಾಪನಾಶಿನಿ ನದಿಯಲ್ಲಿ ಅಕ್ರಮ ಮರಳು ದಂಧೆಗೆ ಬ್ರೇಕ್: ಹಿಟಾಚಿ, ಟಿಪ್ಪರ್ ವಶಕ್ಕೆ

ಪಾಪನಾಶಿನಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ಶಿರ್ವ ಪೊಲೀಸರು ದಾಳಿ ನಡೆಸಿ, ಹಿಟಾಚಿ ಯಂತ್ರ ಮತ್ತು ಎರಡು ಟಿಪ್ಪರ್ ಮರಳನ್ನು ವಶಪಡಿಸಿಕೊಂಡಿದ್ದಾರೆ.

ತೇಜಸ್ವಿ ಯಾದವ್ ಪತ್ನಿಯನ್ನು ‘ಜೆರ್ಸಿ ಹಸು’ ಎಂದ ಮಾಜಿ ಶಾಸಕ: ಬಿಹಾರದಲ್ಲಿ ರಾಜಕೀಯ ವಿವಾದ

ಬಿಹಾರದಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದ್ದು, ಮಾಜಿ ಶಾಸಕ ರಾಜ್ ಬಲ್ಲಭ್ ಯಾದವ್ ಅವರು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಪತ್ನಿ ರಾಜಶ್ರೀ ಯಾದವ್ ಅವರ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ.

ಯುವಕರಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ

ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸುವುದಿಲ್ಲ, ಆದರೆ ಅದು ದೇಹದಲ್ಲಿ ಅಪಾಯಕಾರಿ ಮಟ್ಟವನ್ನು ತಲುಪಿದಾಗ ಕೆಲವು ಚಿಹ್ನೆಗಳು ಕಾಣಿಸಿಕೊಳ್ಳಬಹುದು.

ದಿನ ವಿಶೇಷ – ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ

ಭಾರತದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವನರಕ್ಷಕ ಶಹೀದರ ಸ್ಮೃತಿಗೆ ಅರ್ಪಿತವಾದ ದಿನವೇ ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ (National Forest Martyrs Day).