ಕನ್ನಡ ಭಾಷಣದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ – ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ

Date:

spot_img

ಕಾರ್ಕಳ: ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ದಿನಾಂಕ 27 ಡಿಸೆಂಬರ್ 2025ರಂದು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದವು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು.

ಈ ಸ್ಪರ್ಧೆಗಳಲ್ಲಿನ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಹಾಗೂ ಕಾರ್ಕಳ ತಾಲೂಕಿನಿಗೆ ಹೆಮ್ಮೆಯನ್ನು ತಂದಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲಿನ ಆಳವಾದ ಅಭಿಮಾನವನ್ನು ತಮ್ಮ ಭಾಷಣದಲ್ಲಿ ಸ್ಪಷ್ಟವಾಗಿ ಪ್ರತಿಬಿಂಬಿಸಿದ ಆದ್ಯ ಅವರು, ಸುಸ್ಪಷ್ಟ ಉಚ್ಚಾರಣೆ, ವಿಚಾರಬದ್ಧ ವಿಷಯ ಪ್ರಸ್ತುತಿ ಹಾಗೂ ಆತ್ಮವಿಶ್ವಾಸಪೂರ್ಣ ನಿರೂಪಣೆಯಿಂದ ಮೆಚ್ಚುಗೆಗೆ ಪಾತ್ರರಾದರು.

ಸ್ಪರ್ಧೆಯ ವೇಳೆ ಆದ್ಯ ಅವರು ಸಮಕಾಲೀನ ವಿಚಾರಗಳನ್ನು ಕನ್ನಡದ ಸೊಗಸಿನ ಭಾಷೆಯೊಂದಿಗೆ ಜೋಡಿಸಿ ಮಂಡಿಸಿದ ರೀತಿಗೆ ಪ್ರೇಕ್ಷಕರಿಂದಲೂ ಪ್ರಶಂಸೆ ವ್ಯಕ್ತವಾಯಿತು. ವಿದ್ಯಾರ್ಥಿನಿಯ ಶ್ರಮ, ನಿರಂತರ ಅಭ್ಯಾಸ ಮತ್ತು ಮಾರ್ಗದರ್ಶನದ ಫಲವಾಗಿ ಈ ಮಹತ್ವದ ಸಾಧನೆ ಸಾಧ್ಯವಾಗಿದೆ ಎಂದು ಕಾಲೇಜು ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಆದ್ಯ ಎಸ್. ಪಡ್ರೆ ಅವರ ಈ ಸಾಧನೆಗೆ ಕ್ರಿಯೇಟಿವ್ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ರಾಜ್ಯ ಮಟ್ಟದ ಸ್ಪರ್ಧೆಯಲ್ಲೂ ಆದ್ಯ ಅವರು ಇನ್ನೂ ಹೆಚ್ಚಿನ ಸಾಧನೆ ಮಾಡಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಲಿ ಎಂಬ ಹಾರೈಕೆಯನ್ನು ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.