spot_img

ಸೆಪ್ಟೆಂಬರ್ 12 ಕಾರ್ಕಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಗ್ಯಾರಂಟಿ ಸಮಾವೇಶವನ್ನು ಉದ್ಘಾಟಿಸಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು

ಪುರಸಭೆ ಹಾಗೂ ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ

ಕಾರ್ಕಳ : ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಆಶ್ರಯದಲ್ಲಿ ಕಾರ್ಕಳ‌ ಪುರಸಭೆ ಮತ್ತು ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಮತ್ತು ಅದಾಲತ್ ಕಾರ್ಯಕ್ರಮವು ದಿನಾಂಕ 12/09/2025 ನೇ ಶುಕ್ರವಾರ ಅಪರಾಹ್ನ 3.00 ಗಂಟೆಗೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಜರುಗಲಿದ್ದು ಕಾರ್ಯಕ್ರಮವನ್ನು ಕರ್ನಾಟಕ‌ ಸರಕಾರದ ಮಹಿಳಾ ಮತ್ತು ಮಕ್ಕಳ‌‌ ಕಲ್ಯಾಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಸುನೀಲ್ ಕುಮಾರ್ ವಹಿಸಲಿದ್ದು ಮುಖ್ಯ ಅತಿಥಿಯಾಗಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಆಶೋಕ್ ಕುಮಾರ್ ಕೊಡವೂರು, ಉಪಾದ್ಯಕ್ಷರಾದ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಾಳ ಅಜಿತ್ ಹೆಗ್ಡೆ, ಪುರಸಭೆಯ ಅಧ್ಯಕ್ಷರಾದ ಯೋಗೀಶ್ ದೇವಾಡಿಗ, ಕುಕ್ಕುಂದೂರು ಪಂಚಾಯತ್ ಅದ್ಯಕ್ಷೆ ಶ್ರೀಮತಿ ಉಷಾ ಹಾಗೂ ಇಲಾಖಾ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಯ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಸಮಾವೇಶದಲ್ಲಿ ಉಪಸ್ಥಿತರಿದ್ದು ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷರಾದ ಮಾಳ ಅಜಿತ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬುರುಡೆ ಪ್ರಕರಣ: ಸೌಜನ್ಯ ಸಂಬಂಧಿ ವಿಠಲ್ ಗೌಡನನ್ನು ಸ್ಥಳ ಮಹಜರಿಗೆ ಕರೆ ತಂದ ಎಸ್‌ಐಟಿ

ಪ್ರಕರಣಕ್ಕೆ ಸಂಬಂಧಿಸುದಂತೆ ಸೌಜನ್ಯ ಅವರ ಮಾವನಾದ ವಿಠಲ್ ಗೌಡನನ್ನು ಇಂದು (ಸೆಪ್ಟೆಂಬರ್ 10) ಸಂಜೆ 4:30ರ ಸುಮಾರಿಗೆ ಘಟನಾ ಸ್ಥಳಕ್ಕೆ ಕರೆತಂದು ಸ್ಥಳ ಮಹಜರು ನಡೆಸುತ್ತಿದೆ.

ಕಾರ್ಕಳದ ಎಸ್.ವಿ.ಟಿ. ಶಾಲೆಗೆ ಬಾಲ್-ಬ್ಯಾಡ್ಮಿಂಟನ್‌ನಲ್ಲಿ ದ್ವಿತೀಯ ಸ್ಥಾನ; ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲ್ - ಬ್ಯಾಡ್ಮಿಂಟನ್ ಪಂದ್ಯಾಟ ದಲ್ಲಿ ಎಸ್.ವಿ.ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳ. ಇಲ್ಲಿನ ಬಾಲಕರ ತಂಡವು ದ್ವಿತೀಯ ಸ್ಥಾನಗಳಿಸಿತು

ತಮಾಷೆಯ ಮಾತು ಕೊಲೆಯಲ್ಲಿ ಅಂತ್ಯ: ಹಣ್ಣಿನ ವ್ಯಾಪಾರಿಗಳ ನಡುವಿನ ಜಗಳಕ್ಕೆ ಚಿಂತಾಮಣಿಯಲ್ಲಿ ದುರಂತ ಅಂತ್ಯ

ಚಿಂತಾಮಣಿ ಪಟ್ಟಣದಲ್ಲಿ ನಡೆದ ದಾರುಣ ಘಟನೆಯಲ್ಲಿ, ಇಬ್ಬರು ಗೆಳೆಯರ ನಡುವಿನ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಮೂಗಿನ ಹತ್ತಿರದ ಪಿಂಪಲ್ ಒಡೆಯುವ ಮೊದಲು ಯೋಚಿಸಿ: ಮೆದುಳಿನ ಸೋಂಕಿನ ಅಪಾಯಕ್ಕೆ ಸಿಲುಕಿಸುವ ಕರಾಳ ಸತ್ಯ!

ಮೊಡವೆಗಳನ್ನು ಒಡೆದರೆ ಅಥವಾ ಚಿವುಟಿದರೆ ಗಂಭೀರ ಸೋಂಕು ಉಂಟಾಗುವ ಸಾಧ್ಯತೆ ಇದೆ ಎಂದು ಚರ್ಮರೋಗ ತಜ್ಞರು ಎಚ್ಚರಿಕೆ ನೀಡುತ್ತಾರೆ.