spot_img

CISF ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ವಂಚನೆ ಆರೋಪ: ಮಂಗಳೂರಿನಲ್ಲಿ ವ್ಯಕ್ತಿಯ ಆತ್ಮಹತ್ಯೆ!

Date:

ಮಂಗಳೂರು, ಮಾರ್ಚ್. 3: ಉತ್ತರ ಪ್ರದೇಶದ ವ್ಯಕ್ತಿಯೋರ್ವ ಸಿಐಎಸ್‌ಎಫ್ ಮಹಿಳಾ ಅಧಿಕಾರಿಯ ವಿರುದ್ಧ ಲೈಂಗಿಕ ವಂಚನೆ ಮತ್ತು ಹಣಕಾಸು ಮೋಸದ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಲಾಡ್ಜ್‌ನಲ್ಲಿ ನಡೆದಿದೆ.

ಮೃತರನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್ (40) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಮೊದಲು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, CISF ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ.

ಪ್ರೇಮದ ಹೆಸರಿನಲ್ಲಿ ವಂಚನೆ
ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್, ವಸ್ತುಪ್ರದರ್ಶನಕ್ಕಾಗಿ ಮಂಗಳೂರಿಗೆ ಬಂದಿದ್ದರು. ಆದರೆ, ಮಾರ್ಚ್.3ರಂದು ನಗರದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ವಿಡಿಯೋ ಪ್ರಕಾರ, ಮೋನಿಕಾ ಈಗಾಗಲೇ ವಿವಾಹಿತೆಯಾಗಿದ್ದು, ಆ ಮಾಹಿತಿಯನ್ನು ಮುಚ್ಚಿಟ್ಟು ದೈಹಿಕ ಮತ್ತು ಆರ್ಥಿಕ ಲಾಭ ಪಡೆದು ತಮ್ಮನ್ನು ವಂಚಿಸಿದ್ದಾಳೆ ಎಂದು ಆರೋಪಿಸಲಾಗಿದೆ.

15 ಲಕ್ಷ ರೂ. ಹಣ, ಚಿನ್ನ ವಂಚನೆ ಆರೋಪ
ಮೃತನ ಸಹೋದರ ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, 15 ಲಕ್ಷ ರೂಪಾಯಿ ಮತ್ತು 8 ಲಕ್ಷ ಮೌಲ್ಯದ ಚಿನ್ನ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ CISF ಅಧಿಕಾರಿ ಮೋನಿಕಾ ಸಿಹಾಗ್‌ಗೆ ನೋಟೀಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.