
ಮಂಗಳೂರು : ನಗರದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಉಳ್ಳಾಲ-ಮುಡಿಪು ಮಾರ್ಗದ 44.A 51 ಸಂಖ್ಯೆಯ ಬಸ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಂಡಕ್ಟರ್ ಪ್ರದೀಪ್ ಎಂಬಾತ, ಯುವತಿಯ ಪಕ್ಕದಲ್ಲೇ ನಿಂತು ಅವಳ ಖಾಸಗಿ ಅಂಗಗಳಿಗೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಬಸ್‌ನಲ್ಲಿ ಇದ್ದ ಮತ್ತೊಬ್ಬ ಪ್ರಯಾಣಿಕನು ಘಟನೆಯ ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ದೃಢವಾಗಿ ಸೆರೆಹಿಡಿದಿದ್ದಾನೆ.
ಸಂಘಟನೆಯ ಗಂಭೀರತೆ ಅರಿತ ಮಂಗಳೂರು ಕೆಎಸ್‌ಆರ್‌ಟಿಸಿ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ತಕ್ಷಣವೇ ಆರೋಪಿಗೆ ಅಮಾನತು ವಿಧಿಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಆರಂಭಿಸಲಾಗಿದೆ.
ಈ ಕೃತ್ಯವನ್ನು ಸಾರ್ವಜನಿಕ ವಲಯದಲ್ಲಿ ತೀವ್ರವಾಗಿ ಖಂಡಿಸಲಾಗಿದ್ದು, ಮಹಿಳಾ ಪ್ರಯಾಣಿಕರ ಸುರಕ್ಷತೆ ಕುರಿತಂತೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ವ್ಯಕ್ತವಾಗಿದೆ.