spot_img

ಪರಮಪೂಜ್ಯ ಲಿಂಗೈಕ್ಯ ಡಾ ಶರಣಬಸಪ್ಪ ಅಪ್ಪವರಿಗೆ ಕೇಂದ್ರ ಸರ್ಕಾರ ಈ ಬಾರಿ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಲಿ : ಶಶೀಲ್ ಜಿ ನಮೋಶಿ

Date:

spot_img

ಕಲಬುರ್ಗಿ : ಕೇಂದ್ರ ಸರ್ಕಾರ ಲಿಂಗೈಕ್ಯ ಪರಮ ಪೂಜ್ಯ ಶ್ರೀ ಶರಣಬಸಪ್ಪ ಅಪ್ಪ ಅವರಿಗೆ ಮರಣೋತ್ತರ ಪ್ರಶಸ್ತಿ ನೀಡಿ ಕಲ್ಯಾಣ ಕರ್ನಾಟಕದ ಗುಣಮಟ್ಟದ ಶೈಕ್ಷಣಿಕ ಕ್ರಾಂತಿಯ ಪಿತಾಮಹನಿಗೆ ಗೌರವ ಸಲ್ಲಿಸಲಿ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಆಗ್ರಹಿಸಿದರು

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸ್ಯಾಕ್ ಸಭಾಂಗಣದಲ್ಲಿ ನಡೆದ ಅಗಸ್ಟ್ 14 ರಂದು ಲಿಂಗೈಕ್ಯರಾದ ಪರಮ ಪೂಜ್ಯ ಶ್ರೀ ಶರಣಬಸಪ್ಪ ಅಪ್ಪ ಅವರಿಗೆ ಸಂಸ್ಥೆಯ ವತಿಯಿಂದ ನಡೆದ ಶೃದ್ಧಾಂಜಲಿಯ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಗತ್ತಿಗೆ ಪ್ರಜಾಪ್ರಭುತ್ವದ ಕಲ್ಪನೆ ಕೊಟ್ಟು ಪ್ರಪಂಚದ ಮೊದಲ ಪಾರ್ಲಿಮೆಂಟ್ ಪ್ರಾರಂಭವಾಗಿದ್ದು ಕಲ್ಯಾಣ ಕರ್ನಾಟಕದಲ್ಲಿ ಅಣ್ಣ ಬಸವಣ್ಣನವರ ನೇತೃತ್ವದಲ್ಲಿ. ಅಂತಹ ವಿಶ್ವ ಗುರು ಬಸವಣ್ಣ ಭಾರತದ ಶಕ್ತಿ ಕೇಂದ್ರ ಸಂಸತ್ತು ಮುಂದೆ ಇರಬೇಕೆಂದು ಬಯಸಿ ಸ್ವತಃ ಅದರ ಸಂಪೂರ್ಣ ಖರ್ಚು ವೆಚ್ಚ ಭರಿಸಿ ಸಂಸತ್ತಿನ 9 ನೇ ಗೇಟ್ ಮುಂದೆ ಬಸವಣ್ಣನ ಪುತ್ಥಳಿ ಸ್ಥಾಪಿಸಿ ಕಲ್ಯಾಣ ನಾಡಿನ ಕೀರ್ತಿಯನ್ನು ಹೆಚ್ಚಿಸಿದವರು ಲಿಂಗೈಕ್ಯ ಡಾ ಶರಣಬಸಪ್ಪ ಅಪ್ಪ ಎಂದು ಹೇಳಿದರು.

ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಕಲ್ಯಾಣ ಕರ್ನಾಟಕ ದ ಕಲಬುರ್ಗಿಯಲ್ಲಿ ಮೊಟ್ಟ ಮೊದಲ ಬಾರಿಗೆ ಗುಣಮಟ್ಟದ ಶೈಕ್ಷಣಿಕ ಕ್ರಾಂತಿಯ ಪಿತಾಮಹ ಅಪ್ಪಾವರು, ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿದ್ದಾಗಲೆ ಕಲಬುರ್ಗಿಯಿಂದ ದೂರದ ಧಾರವಾಡಕ್ಕೆ ಹೋಗಿ ಸ್ನಾತಕೋತ್ತರ ಪದವಿ ಮಾಡುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಪ್ರತಿಪಾದಿಸಿ 1972 ರಲ್ಲಿ ಕವಿವಿ ಸ್ನಾತಕೋತ್ತರ ಕೇಂದ್ರ ಕಲಬುರ್ಗಿಯಲ್ಲಿ ಸ್ಥಾಪನೆ ಮಾಡುವಂತೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ ಮುಂದೆ ಇದೆ 1982 ರಲ್ಲಿ ಕಲಬುರ್ಗಿ ಸ್ವತಂತ್ರ ವಿಶ್ವ ವಿದ್ಯಾಲಯ ಪ್ರಾರಂಭವಾಗಿ ಈ ಭಾಗದ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಮಾಡಲು ಅನುಕೂಲವಾಯಿತು. ಇವರು ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘ ಕರ್ನಾಟಕದಲ್ಲಿ ಅಷ್ಟೇ ಅಲ್ಲ ಇಡಿ ಭಾರತವೆ ಕಲಬುರ್ಗಿಯ ಕಡೆ ನೋಡುವಂತೆ ಮಾಡಿದರು. ಆಯಾ ಕಾಲಕ್ಕೆ ಅನೂಕೂಲವಾಗುವ ವಿನೂತನ ಶೈಕ್ಷಣಿಕ ವಿಭಾಗಗಳನ್ನು ಸ್ಥಾಪಿಸಿ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಪಾಲಿಗೆ ಬೆಳಕಾದರು ಎಂದು ಹೇಳಿದರು. ಇಂದು ಇಡಿ ರಾಜ್ಯದಲ್ಲಿಯೆ ಅತಿ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಬರುತ್ತಿರುವುದು ಅಪ್ಪ ಅವರು ನೀಡಿದ ಗುಣಮಟ್ಟದ ಶಿಕ್ಷಣವೆ ಕಾರಣ ಎಂದು ಹೇಳಿದರು.

ನಂತರ ಮಾತನಾಡಿದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಮಾತನಾಡಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣರಾದವರು ಡಾ ಶರಣಬಸಪ್ಪ ಅಪ್ಪ ಅವರು ಎಂದು ಹೇಳಿದರು. ಕೆಜೆ ಯಿಂದ ಪಿಜಿಯವರೆಗೆ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸಿ ದೇಶಕ್ಕೆ ಅನೇಕ ವೈದ್ಯರನ್ನು, ಇಂಜಿನಿಯರನ್ನು ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದು ಹೇಳಿದರು

ಈ ಸಂದರ್ಭದಲ್ಲಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ಡಾ ಸಂಜಯ ಮಾಕಲ್ ಅಪ್ಪ ಅವರ ಅನೇಕ ಐತಿಹಾಸಿಕ ಘಟನೆಗಳನ್ನು ಸ್ಮರಿಸಬಹುದು, ವಿ ಜಿ ಮಹಿಳಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ ಮಹೇಶ್ ಗಂವ್ಹಾರ ಮಾತನಾಡಿದರು.

ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್, ಆಡಳಿತ ಮಂಡಳಿ ಸದಸ್ಯರಾದ ಡಾ ಮಹಾದೇವಪ್ಪ ರಾಂಪೂರೆ,ಡಾ ಶರಣಬಸಪ್ಪ ಹರವಾಳ, ಸಾಯಿನಾಥ ಪಾಟೀಲ್,ಡಾ ಅನಿಲಕುಮಾರ ಪಟ್ಟಣ, ನಾಗಣ್ಣ ಘಂಟಿ, ಡಾ ಗುರುಲಿಂಗಪ್ಪ ಪಾಟೀಲ್, ಆಡಳಿತಾಧಿಕಾರಿ ಡಾ ಸಿ ಸಿ ಪಾಟೀಲ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು ಕ್ವಾಲಿಟಿ ಅಶ್ಯೂರೆನ್ಸ ಸೆಲ್ ಮುಖ್ಯಸ್ಥೆ ಡಾ ಉಮಾ ರೇವೂರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಲಾಭರಹಿತ ಸಂಸ್ಥೆಗಳ ದಿನ

ಈ ದಿನದ ಮುಖ್ಯ ಗುರಿ, ಸಮಾಜಕ್ಕೆ ಸಹಾಯ ಮಾಡುವ ಅಸಂಖ್ಯಾತ ಸಂಸ್ಥೆಗಳ ಮಹತ್ವದ ಕೊಡುಗೆಗಳನ್ನು ಗುರುತಿಸುವುದು

ನಾಳೆ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ ಸಿಂಹ ಸಂಕ್ರಮಣ ಆಚರಣೆ

ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ 2025ರ ಆಗಸ್ಟ್ 17ರಂದು (ರವಿವಾರ) ಸಿಂಹ ಸಂಕ್ರಮಣ ಮಹೋತ್ಸವ ಭಕ್ತಿಭಾವದಿಂದ ಜರಗಲಿದೆ.

ಮೂಡುಬಿದಿರೆ: ಬೆಳುವಾಯಿಯಲ್ಲಿ ಕಾರು ಅಪಘಾತ; ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೂಡುಬಿದಿರೆ ತಾಲೂಕಿನ ಬೆಳುವಾಯಿ ಹೋಮಲ್ಕೆ ಎಂಬಲ್ಲಿ ಕಾರು ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಪಡಕುತ್ಯಾರು ಚಾತುರ್ಮಾಸ್ಯ ನಿರತ ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್

ಶ್ರೀ ಮದ್ ಮಹಾಸಂಸ್ಥಾನ ಸರಸ್ವತಿ ಪೀಠ ಕಟಪಾಡಿ ಪಡಕುತ್ಯಾರು ಇಲ್ಲಿ ಚಾತುರ್ಮಾಸ್ಯ ವೃತಾಚರಣೆ ನಿರತ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳನ್ನು ಶಾಸಕ ವಿ. ಸುನಿಲ್ ಕುಮಾರ್ ಶನಿವಾರ ಭೇಟಿಯಾಗಿ ಆಶಿರ್ವಾದ ಪಡೆದರು.