ಶಿರ್ಲಾಲು ದನಗಳ್ಳತನ ಪ್ರಕರಣ ಭೇದಿಸಿದ ಅಜೆಕಾರು ಪೊಲೀಸರು: ಮೂಡಬಿದ್ರೆ, ನಲ್ಲೂರು ಮೂಲದ ಮೂವರ ಸೆರೆ

Date:

spot_img

ಕಾರ್ಕಳ: ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರ್ಲಾಲು ಎಂಬಲ್ಲಿ ಕೆಲವು ದಿನಗಳ ಹಿಂದೆ ತಲವಾರು ತೋರಿಸಿ ಬೆದರಿಸಿ ಹಟ್ಟಿಯಲ್ಲಿದ್ದ ದನಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ನಲ್ಲೂರು ಗ್ರಾಮದ ಬೋರ್ಕಟ್ಟೆಯ ಮೊಹಮ್ಮದ್ ಯೂನಿಸ್ (31), ಮೂಡಬಿದ್ರೆ ಕಲ್ಲಬೆಟ್ಟುವಿನ ಮೊಹಮ್ಮದ್ ನಾಸೀರ್ (28), ಮತ್ತು ಮೂಡಬಿದ್ರೆ ಪುತ್ತಿಗೆ ಗ್ರಾಮದ ಮಿಜಾರಿನ ಮೊಹಮ್ಮದ್ ಇಕ್ಬಾಲ್ (29) ಎಂದು ಗುರುತಿಸಲಾಗಿದೆ.

ಕೃತ್ಯದ ವಿವರ ಮತ್ತು ವಶಪಡಿಸಿಕೊಂಡ ವಸ್ತುಗಳು

ಸೆಪ್ಟೆಂಬರ್ 28ರ ರಾತ್ರಿ, ಮೂವರು ಅಪರಿಚಿತ ವ್ಯಕ್ತಿಗಳು ಜಯಶ್ರೀ ಎಂಬುವವರ ಮನೆಯ ದನದ ಕೊಟ್ಟಿಗೆಗೆ ತಲವಾರುಗಳೊಂದಿಗೆ ನುಗ್ಗಿ, ಬೆದರಿಸಿ ಸುಮಾರು ₹35,000 ಮೌಲ್ಯದ 3 ಹಸುಗಳನ್ನು ಕಳ್ಳತನ ಮಾಡಿರುವ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 2 ತಲವಾರು, ಕಾರು, ಬೊಲೆರೊ ವಾಹನ ಮತ್ತು 5 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹5,87,000 ಎಂದು ಅಂದಾಜಿಸಲಾಗಿದೆ.

ಪೊಲೀಸ್ ಕಾರ್ಯಾಚರಣೆ

ಈ ಪ್ರಕರಣದ ತನಿಖೆಗಾಗಿ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ. ಹರ್ಷಾ ಪ್ರಿಯಂವದಾ ಅವರ ಮಾರ್ಗದರ್ಶನದಲ್ಲಿ, ತನಿಖಾಧಿಕಾರಿ ಮಂಜಪ್ಪ ಡಿ.ಆರ್ ಮತ್ತು ಅಜೆಕಾರು ಠಾಣಾ ಎಸ್ಸೈ ಮಹೇಶ್ ಟಿ.ಎಂ. ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಕಾರ್ಯಾಚರಣೆಯಲ್ಲಿ ಅಜೆಕಾರು, ಹೆಬ್ರಿ ಮತ್ತು ಕಾರ್ಕಳ ಗ್ರಾಮಾಂತರ ಠಾಣೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.