spot_img

ಕಬ್ಬಿಣದ ಸೆಂಟ್ರಿಂಗ್‌ ಶೀಟ್ ಕಳವು: ಅಂತರ್ ಜಿಲ್ಲಾ ಕಳ್ಳನ ಬಂಧನ, 5.5 ಲಕ್ಷ ಮೌಲ್ಯದ ಸ್ವತ್ತು ವಶ

Date:

spot_img
spot_img

ಉಡುಪಿ: ಕಳೆದ ಒಂದು ವಾರದ ಹಿಂದೆ ಶಿರ್ವ ಗ್ರಾಮದ ಬಂಟಕಲ್ಲು ಪ್ರದೇಶದಲ್ಲಿ ಮನೆಯೊಂದರ ಬಳಿ ಇಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್‌ ಶೀಟುಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಓರ್ವ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಬೈಂದೂರಿನ ಶಿರೂರು ಗ್ರಾಮದ ನಿವಾಸಿ ರಶೀದ್‌ ಯಾನೆ ರಶೀದ್‌ ಮೊಯಿದ್ದೀನ್‌ (40) ಎಂದು ಗುರುತಿಸಲಾಗಿದೆ. ಅಕ್ಟೋಬರ್ 3 ರಿಂದ ಅಕ್ಟೋಬರ್ 6 ರ ಮಧ್ಯೆ ಈ ಕಳ್ಳತನ ನಡೆದಿತ್ತು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಹುತೇಕ ಕಳ್ಳತನ ಪ್ರಕರಣಗಳ ಪತ್ತೆ

ಬಂಧಿತ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆತನು ಕೇವಲ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟಕಲ್‌, ಪಂಜಿಮಾರ್‌ ಅಲ್ಲದೆ, ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಎಲ್ಲೂರು, ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಟ್‌ಬೆಳ್ತೂರ್‌ನಲ್ಲೂ ಕಬ್ಬಿಣದ ಶೀಟ್‌ಗಳನ್ನು ಕಳವು ಮಾಡಿರುವುದು ಪತ್ತೆಯಾಗಿದೆ.

ಬಂಧಿತನಿಂದ ಒಟ್ಟು 300 ಕಬ್ಬಿಣದ ಶೀಟ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಮಹಿಂದ್ರ ಸುಪ್ರೋ ವಾಹನ ಸೇರಿ ಒಟ್ಟು ₹5,50,000 ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ರಶೀದ್‌ ವಿರುದ್ಧ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಟ್ಟು 30 ಕ್ಕೂ ಅಧಿಕ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಿಟ್ಟೆಯಲ್ಲಿ ನಡೆದ ಕೇಶದಾನ

ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ನಿಟ್ಟೆ ಕಾಲೇಜಿನಿಂದ 'ಕೇಶ ದಾನ' ಅಭಿಯಾನ ನಡೆಯಿತು.

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , ‘ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು’ ಎಂದು ಸ್ಪಷ್ಟನೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , 'ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು' ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ಕಾರ್ಕಳ ಕ್ರಿಕೆಟ್ ಅಸೋಸಿಯೇಷನ್: 2025-26 ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಕಳ ಕ್ರಿಕೆಟ್ ಅಸೋಸಿಯೇಷನ್ 2025-26 ರ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ .

ವೈದ್ಯೆ ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ: 6 ತಿಂಗಳ ನಂತರ ವೈದ್ಯ ಪತಿ ಡಾ. ಮಹೇಂದ್ರರೆಡ್ಡಿ ಬಂಧನ

ವೈದ್ಯೆಯಾಗಿದ್ದ ಪತ್ನಿಗೆ ಇಂಜೆಕ್ಷನ್ ನೀಡಿ ಹತ್ಯೆಗೈದಿದ್ದ ಆರೋಪಿ ಡಾಕ್ಟರ್‌ ಈಗ ಪೊಲೀಸರ ಅತಿಥಿಯಾಗಿದ್ದಾರೆ.