
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣಿ ಗ್ರಾಮದ ಶಾಲೆಯಲ್ಲಿ ಕುಡಿಯುವ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಕೃತ್ಯವನ್ನು 5ನೇ ತರಗತಿಯ ಬಾಲಕನೇ ‘ಹುಡುಗಾಟಿಕೆಗೆ’ ಮಾಡಿರುವುದು ದೃಢಪಟ್ಟಿದೆ.
ಶಾಲಾ ಮಕ್ಕಳ ಕುಡಿಯುವ ನೀರಿಗೆ ವಿಷ ಬೆರೆಸಿದ ಈ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದರು. ಅವರ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿದ್ದರು. ತನಿಖೆ ವೇಳೆ 5ನೇ ತರಗತಿ ವಿದ್ಯಾರ್ಥಿಯು ತಾನೇ ಈ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ.