ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ SSLC ವಿದ್ಯಾರ್ಥಿಯ ಬರ್ಬರ ಹತ್ಯೆ !

Date:

spot_img

ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೆಳೆಯರ ನಡುವಿನ ಕ್ಷುಲ್ಲಕ ಜಗಳವೊಂದು ವಿಕೋಪಕ್ಕೆ ತಿರುಗಿ, SSLC ವಿದ್ಯಾರ್ಥಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಆಘಾತಕಾರಿ ಘಟನೆ ಮಂಗಳವಾರ ನಡೆದಿದೆ.

ಶಿವಮೊಗ್ಗದ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ಸಂಕೇತ್ ಮೃತಪಟ್ಟ ದುರ್ದೈವಿ. ಪರೀಕ್ಷೆಗಳು ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶೇಷ ತರಗತಿ ಮುಗಿಸಿ ಸಂಕೇತ್ ಮನೆಗೆ ಮರಳುತ್ತಿದ್ದನು. ಈ ವೇಳೆ ಶಾಲೆಯಿಂದ ಸ್ವಲ್ಪ ದೂರದಲ್ಲಿಯೇ ಈತನನ್ನು ತಡೆದ 3 ರಿಂದ 4 ಬಾಲಕರ ಗುಂಪು ಹಲ್ಲೆ ನಡೆಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾಲೆಯನ್ನು ಅರ್ಧಕ್ಕೆ ಬಿಟ್ಟಿದ್ದ (ಡ್ರಾಪ್‌ಔಟ್) ಕೆಲವು ಬಾಲಕರು ಹಳೆಯ ದ್ವೇಷ ಅಥವಾ ಕ್ಷುಲ್ಲಕ ಕಾರಣಕ್ಕೆ ಸಂಕೇತ್ ಮೇಲೆ ಆಕ್ರಮಣ ಮಾಡಿದ್ದಾರೆ ಎನ್ನಲಾಗಿದೆ.

ಜಗಳದ ವೇಳೆ ತೀವ್ರವಾಗಿ ಹಲ್ಲೆಗೊಳಗಾದ ಬಾಲಕ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ದುರಾದೃಷ್ಟವಶಾತ್ ಆತ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೆಳೆಯರ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಕೈಯಿಂದ ಗುದ್ದಿದ ಪರಿಣಾಮ ಬಾಲಕ ಮೃತಪಟ್ಟಿದ್ದಾನೆ ಎಂದು ಎಸ್‌ಪಿ ತಿಳಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.