ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆಘಾತಕಾರಿ ಘಟನೆ: ಸಾಫ್ಟ್‌ವೇರ್ ಎಂಜಿನಿಯರ್ ಮಗಳು, ತಾಯಿ ನೇಣಿಗೆ ಶರಣು

Date:

spot_img

ಬೆಂಗಳೂರು : ರಾಜಧಾನಿಯ ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಆಘಾತಕಾರಿ ಘಟನೆ ನಡೆದಿದ್ದು, ಸಾಫ್ಟ್‌ವೇರ್ ಎಂಜಿನಿಯರ್‌ ಮಗಳು ಮತ್ತು ಅವರ ತಾಯಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ತಂದೆಗೆ ಕೊನೆಯ ಕರೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಾಗೊಂಡನಹಳ್ಳಿ ನಿವಾಸಿಗಳಾದ ಶ್ರೀಜಾ ರೆಡ್ಡಿ (25) ಮತ್ತು ಅವರ ತಾಯಿ ರಚಿತಾ ರೆಡ್ಡಿ (48) ಆತ್ಮಹತ್ಯೆ ಮಾಡಿಕೊಂಡವರು.

ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿರುವ ಶ್ರೀಧರ್ ರೆಡ್ಡಿ ಅವರು ಪತ್ನಿ ರಚಿತಾ ರೆಡ್ಡಿ ಮತ್ತು ಪುತ್ರಿ ಶ್ರೀಜಾ ರೆಡ್ಡಿ ಅವರೊಂದಿಗೆ ನಾಗೊಂಡನಹಳ್ಳಿಯ ಸ್ವಂತ ಮನೆಯಲ್ಲಿ ವಾಸಿಸುತ್ತಿದ್ದರು. ಎಂಜಿನಿಯರಿಂಗ್ ಪದವೀಧರೆಯಾಗಿರುವ ಶ್ರೀಜಾ, ಖಾಸಗಿ ಕಂಪನಿಯೊಂದರಲ್ಲಿ ಡೇಟಾ ಅನಲಿಸ್ಟ್ (ಟೆಕ್ಕಿ) ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಚಿತಾ ಗೃಹಿಣಿಯಾಗಿದ್ದರು.

ಸೋಮವಾರ ಬೆಳಗ್ಗೆ ಶ್ರೀಧರ್ ರೆಡ್ಡಿ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಪತ್ನಿ ಮತ್ತು ಮಗಳು ಕರೆ ಸ್ವೀಕರಿಸದಿದ್ದಾಗ ಆತಂಕಗೊಂಡ ಶ್ರೀಧರ್ ರೆಡ್ಡಿ ಕೂಡಲೇ ಮನೆಗೆ ಧಾವಿಸಿದ್ದಾರೆ. ಮನೆಯ ಬಾಗಿಲು ಒಡೆದು ಒಳಪ್ರವೇಶಿಸಿದಾಗ, ಕೊಠಡಿಯೊಳಗೆ ತಾಯಿ ಮತ್ತು ಮಗಳು ಇಬ್ಬರೂ ಪ್ರತ್ಯೇಕವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ ಎಂದು ವೈಟ್‌ಫೀಲ್ಡ್ ಠಾಣಾ ಪೊಲೀಸರು ತಿಳಿಸಿದ್ದಾರೆ. ಡೆತ್‌ನೋಟ್ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.