‘ಹೈಕಮಾಂಡ್ ತೀರ್ಮಾನ ಮಾಡಿದರೆ’ ನಾನೇ ಐದು ವರ್ಷ ಸಿಎಂ ! : ಭಾರೀ ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ !

Date:

spot_img

ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ಅವರು ಸೋಮವಾರ (ಅ. 27) ಮಹತ್ವದ ಹೇಳಿಕೆ ನೀಡಿದ್ದಾರೆ. “ಹೈಕಮಾಂಡ್ ತೀರ್ಮಾನ ಮಾಡಿದರೆ, ನಾನೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ” ಎಂದು ಅವರು ಹೇಳಿದ್ದಾರೆ.

ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ, “ಸ್ಪರ್ಧೆ ಎಂಬುದು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರ ಹಕ್ಕು. ಆದರೆ, ಮುಖ್ಯಮಂತ್ರಿ ಸ್ಥಾನದ ಕುರಿತು ಅಂತಿಮವಾಗಿ ಹೈಕಮಾಂಡ್ ಯಾವ ತೀರ್ಮಾನ ಮಾಡುತ್ತದೆ ಎಂಬುದರ ಮೇಲೆ ನನ್ನ ಮುಂದುವರಿಕೆ ನಿಂತಿರುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕಲ್ಲಡ್ಕ ಭಟ್ ಪ್ರಕರಣಕ್ಕೆ ಪ್ರತಿಕ್ರಿಯೆ

ಇದೇ ಸಂದರ್ಭದಲ್ಲಿ, ಆರ್.ಎಸ್.ಎಸ್. ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. “ದ್ವೇಷದ ಭಾಷಣ ಮಾಡುವವರು ಯಾರೇ ಆದರೂ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಎಫ್‌ಐಆರ್ ದಾಖಲು ಮಾಡುತ್ತೇವೆ” ಎಂದು ಅವರು ದೃಢವಾಗಿ ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.