
ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮೃತದೇಹ ಹೂತುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನಾಮಿಕ ವ್ಯಕ್ತಿ ಗುರುತಿಸಿದ ನಾಲ್ಕನೇ ಸ್ಥಳದಲ್ಲಿನ ಅಗೆಯುವ ಕಾರ್ಯಾಚರಣೆಯನ್ನು ವೀಕ್ಷಿಸಲು ಎಸ್‌ಐಟಿ (ವಿಶೇಷ ತನಿಖಾ ದಳ) ಮುಖ್ಯಸ್ಥ ಡಾ. ಪ್ರಣಬ್ ಮೊಹಾಂತಿ ಅವರು ತನಿಖಾಧಿಕಾರಿಗಳಾದ ಅನುಚೇತ್ ಮತ್ತು ಎಸ್‌ಪಿ ಸಿ.ಎ. ಸೈಮನ್ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಈ ಹಿಂದೆ ಮೂರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದರೂ ಯಾವುದೇ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ನಾಲ್ಕನೇ ಜಾಗಕ್ಕೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.