
ತುಮಕೂರು, ಫೆಬ್ರವರಿ.22: ಹೃದಯಾಘಾತದ ಹಿನ್ನೆಲೆಯಲ್ಲಿ 16 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ತುಮಕೂರಿನ ಚಿಕ್ಕನಾಯಕನಳ್ಳಿಯಲ್ಲಿ ನಡೆದಿದೆ. ಬೈರಾಪುರ ಗ್ರಾಮದ ಜಯರಾಮ ಅವರ ಪುತ್ರ ರಾಹುಲ್ ಮೃತ ಯುವಕ.
ನಿನ್ನೆ ಶಾಲೆಯಿಂದ ಮನೆಗೆ ಮರಳಿದ ರಾಹುಲ್‌ಗೆ ರಾತ್ರಿ 9.30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತು. ಆತಂಕಗೊಂಡ ಕುಟುಂಬಸ್ಥರು ತಕ್ಷಣವೇ ಆತನನ್ನ ಹುಳಿಯಾರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತ ಪಟ್ಟಿದ್ದಾನೆ.
ಕಿರಿಯ ವಯಸ್ಸಿನಲ್ಲಿ ಹೃದಯಾಘಾತದಿಂದ ಬಾಲಕನ ಸಾವು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಈ ದುರ್ಘಟನೆಯ ಹಿನ್ನೆಲೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಊರಿನಲ್ಲೂ ತೀವ್ರ ದುಃಖದ ವಾತಾವರಣ ನಿರ್ಮಾಣವಾಗಿದೆ.ಹುಳಿಯಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.