
ಹಿರಿಯಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಉಡುಪಿ ತಾಲೂಕು ಹಾಗೂ ಪ್ರಗತಿ ಬಂದು ಸ್ವಸಹಾಯ ಒಕ್ಕೂಟ ಹಿರಿಯಡ್ಕ ವಲಯದ ವತಿಯಿಂದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದ ಅಡಿಯಲ್ಲಿ ನರ್ಸರಿ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಡಾ.ರವೀಂದ್ರ ಕುಮಾರ್ ಇವರ ಮನೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಕ್ಷಯಮೃತ ಕ್ರೆಡಿಟ್ ಕೊ. ಆಪರೇಟಿವ್ ಸೊಸೈಟಿ ಕೋಟ್ನಕಟ್ಟೆ ಹಿರಿಯಡ್ಕದ ನಿರ್ದೇಶಕರಾದ ಶ್ರೀ ಗಿರೀಶ್ ಪ್ರಭುರವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ. ರವೀಂದ್ರ ಕುಮಾರ್ ಅಧ್ಯಾಪಕರು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಇವರು ಮಾತನ್ನಾಡುತ್ತಾ , ವಿವಿಧ ರೀತಿಯ ಗಿಡಗಳನ್ನು ನರ್ಸರಿಯಲ್ಲಿ ತಯಾರಿಸುವ ವಿಧಾನ, ಅದಕ್ಕೆ ಮಣ್ಣು ಗೊಬ್ಬರ ಮೊದಲಾದ ಅಂಶಗಳ ಬಗ್ಗೆ ಪ್ರಾತ್ಯಕ್ಷಿಕೆ, ಮೂಲಕ ಸವಿಸ್ತಾರವಾದ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ವಿಜಯಲಕ್ಷ್ಮಿ, ವಲಯ ಅಧ್ಯಕ್ಷರಾದ ಶ್ರೀ ಗಣೇಶ್ ನಾಯ್ಕ್, ಒಕ್ಕೂಟದ ಅಧ್ಯಕ್ಷರಾದ ಶ್ರೀ ರವೀಂದ್ರ , ಬೊಮ್ಮಾರಬೆಟ್ಟು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಕೃಷಿ ಮೇಲ್ವಿಚಾರಕರದ ಮಂಜುನಾಥ್ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಅನುಸೂಯರವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನು ಹಿರಿಯಡ್ಕ ವಲಯದ ಮೇಲ್ವಿಚಾರಕರಾದ ಶ್ರೀ ರಾಜುರವರು ಮಾತನಾಡಿ, ಶ್ರೀಮತಿ ಲಕ್ಷ್ಮಿಯವರು ಧನ್ಯವಾದಗೈದರು.
