ದೊಡ್ಡಣಗುಡ್ಡೆಯಲ್ಲಿ 3 ತಿಂಗಳ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮದ ಯಶಸ್ವಿ ಸಮಾರೋಪ ಸಮಾರಂಭ

Date:

spot_img

ಉಡುಪಿ: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಕೌಶಲ್ಯ ತರಬೇತಿಗಳು ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಶ್ಲಾಘನೀಯ ಕಾರ್ಯ ಮಾಡುತ್ತಿದೆ ಎಂದು ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ವಾಸುದೇವ ಭಟ್ ತಿಳಿಸಿದರು. ದೊಡ್ಡಣಗುಡ್ಡೆಯ ಅಶ್ವತ್ಥ ಕಟ್ಟೆ ಗ್ರೀನ್ ರೂಮ್‌ನಲ್ಲಿ ನಡೆದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆಶೀರ್ವಾದದೊಂದಿಗೆ ನಡೆದ ಈ ತರಬೇತಿಯು ಮಹಿಳೆಯರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿದೆ. ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ವಲಯದ ಶಿವಳ್ಳಿ ಸಿ ಒಕ್ಕೂಟದ ಉಪಾಧ್ಯಕ್ಷೆ ಸುಮಿತ್ರಾ ಅವರು ತರಬೇತಿಯ ಪ್ರಯೋಜನವನ್ನು ಪಡೆದು ಆದಾಯದ ಮೂಲ ಕಂಡುಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿ, ಕ್ಷೇತ್ರ ಯೋಜನಾಧಿಕಾರಿ ಸುರೇಂದ್ರ ನಾಯ್ಕ್ ಮಾತನಾಡಿ, ತರಬೇತಿ ಪಡೆದ ಪ್ರತಿಯೊಬ್ಬ ಮಹಿಳೆಯಲ್ಲೂ ಇಂದು ಯಶಸ್ವಿ ಟೈಲರ್ ಆಗುವ ಆತ್ಮವಿಶ್ವಾಸ ಎದ್ದು ಕಾಣುತ್ತಿದೆ ಎಂದು ಶುಭ ಹಾರೈಸಿದರು. ಹೊಲಿಗೆ ಶಿಕ್ಷಕಿ ರೀನಾ ಅವರು ಸಂಸ್ಥೆಯಲ್ಲಿ ಲಭ್ಯವಿರುವ ಇತರ ಸ್ಕಿಲ್ ಡೆವಲಪ್ಮೆಂಟ್ ತರಬೇತಿಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಪುಷ್ಪಾ ಮತ್ತು ನೇತ್ರಾವತಿ ತಮ್ಮ ಅನಿಸಿಕೆ ಹಂಚಿಕೊಂಡರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.