ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ

Date:

spot_img

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವತಿಯಿಂದ ಉಡುಪಿ ತಾಲೂಕಿನಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಆನಂದ್ ಸುವರ್ಣರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಉದ್ಘಾಟನೆ ಬಳಿಕ ಮಾತನಾಡಿದ ಶ್ರೀ ಆನಂದ್ ಸುವರ್ಣ, ಇಂದಿನ ದಿನಗಳಲ್ಲಿ ಕುಟುಂಬದ ಆದಾಯವನ್ನು ಉತ್ತಮಗೊಳಿಸಬೇಕಾದರೆ ಮಾಡುತ್ತಿರುವ ಸ್ವಉದ್ಯೋಗವನ್ನು ಇನ್ನಷ್ಟು ಅಭಿವೃದ್ಧಿಪಡಿಸಿದರೆ ಕುಟುಂಬದ ಖರ್ಚು ವೆಚ್ಚಗಳನ್ನು ಸರಿಯಾಗಿ ನಿಭಾಯಿಸಬಹುದು. ಆದಾಯಕ್ಕಿಂತ ಖರ್ಚು ಜಾಸ್ತಿ ಆಗುತ್ತಿರುವ ಈ ದಿನಗಳಲ್ಲಿ, ಕೈಗೊಂಡಿರುವ ಸ್ವಉದ್ಯೋಗವನ್ನು ಅಭಿವೃದ್ಧಿಪಡಿಸಿ ಬೆಳೆಸುವ ದೃಷ್ಟಿಕೋನ ಇಟ್ಟುಕೊಂಡು ಇವತ್ತಿನ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರುಡ್ಸೆಟ್ ನಿರ್ದೇಶಕರಾದ ಡಾ. ಬೊಮ್ಮಾಯಿಯವರು ಸ್ವ ಉದ್ಯೋಗಕ್ಕೆ ಬೇಕಾದ ಪೂರಕವಾದ ಮಾಹಿತಿಯನ್ನು ಒದಗಿಸಿದರು. ಈ ಸಂದರ್ಭದಲ್ಲಿ ಸಿಡ್ಬಿ ಯೋಜನಾಧಿಕಾರಿ ಶ್ರೀ ಪ್ರವೀಣ್ ರವರು ಸಿಡ್ಬಿ ಸಾಲದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರೆ, ಜಿಲ್ಲಾ ನಿರ್ದೇಶಕರಾದ ಶ್ರೀ ನಾಗರಾಜ್ ಶೆಟ್ಟಿಯವರು ಕೂಡ ಸಿಡ್ಬಿ ಸಾಲಕ್ಕೆ ಪೂರಕವಾಗಿ ಉತ್ತಮ ಮಾಹಿತಿಯನ್ನು ನೀಡಿದರು.

ಈ ಮಹತ್ವದ ಕಾರ್ಯಾಗಾರದಲ್ಲಿ ಒಟ್ಟು 53 ಮಂದಿ ಸ್ವ ಉದ್ಯೋಗ ಮಾಡುತ್ತಿರುವ ಫಲಾನುಭವಿಗಳು ಭಾಗವಹಿಸಿದ್ದರು. ಈ ಪೈಕಿ 34 ಫಲಾನುಭವಿಗಳಿಂದ ಸಾಲದ ಬೇಡಿಕೆಯನ್ನು ಪಡೆದುಕೊಳ್ಳಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.