ನಾಳೆ ಸರ್ಕಾರಿ ಗೌರವದೊಂದಿಗೆ ಎಸ್.ಎಲ್. ಭೈರಪ್ಪ ಅಂತ್ಯಕ್ರಿಯೆ: ಬೆಂಗಳೂರು, ಮೈಸೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

Date:

spot_img
Sl Bairappa

ಬೆಂಗಳೂರು: ಕನ್ನಡದ ಹಿರಿಯ ಮತ್ತು ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ (94) ಅವರು ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ಅಂತಿಮ ದರ್ಶನಕ್ಕೆ ಇರಿಸಲು ವ್ಯವಸ್ಥೆ ಮಾಡಲಾಗಿದೆ.

ಗುರುವಾರ (ಸೆಪ್ಟೆಂಬರ್ 25, 2025) ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 3 ಗಂಟೆಯ ನಂತರ ಪಾರ್ಥಿವ ಶರೀರವನ್ನು ಮೈಸೂರಿಗೆ ತೆಗೆದುಕೊಂಡು ಹೋಗಿ, ಅಲ್ಲಿನ ಕಲಾಮಂದಿರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುವುದು.

ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ವಂಶವೃಕ್ಷ, ದಾಟು, ತಂತು ಮುಂತಾದ ಮಹತ್ವದ ಕಾದಂಬರಿಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಸಾಹಿತ್ಯ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.