
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಕಾರು ಗುರುವಾರ ರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇ ನಲ್ಲಿ ಅಪಘಾತಕ್ಕೀಡಾಗಿದೆ. ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಸಿಂಗೂರ್ ಬಳಿ ಈ ಘಟನೆ ನಡೆದಿದೆ.
ತೀವ್ರ ವೇಗದಲ್ಲಿ ಬಂದ ಲಾರಿ ಗಂಗೂಲಿ ಅವರ ಕಾರಿಗೆ ಡಿಕ್ಕಿ ಹೊಡೆದಿದ್ದು, ತಕ್ಷಣ ಅವರ ಚಾಲಕ ನಿಯಂತ್ರಣ ಪಡೆಯಲು ಪ್ರಯತ್ನಿಸಿದರೂ, ಬೆಂಗಾವಲು ಪಡೆಯ ವಾಹನಗಳು ಪರಸ್ಪರ ಡಿಕ್ಕಿಯಾಗಿವೆ. ಅಪಘಾತ ಭೀಕರವಾದರೂ, ಗಂಗೂಲಿ ಸುರಕ್ಷಿತರಾಗಿದ್ದು, ತಕ್ಷಣವೇ ಬೇರೆ ವಾಹನದಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಬೆಂಗಾವಲು ವಾಹನಗಳಿಗೆ ಹಾನಿಯಾಗಿದೆ, ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.