spot_img

ಮಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ರವರಿಂದ ಉದ್ಘಾಟನೆಗೊಂಡ “ವಿಶೇಷ ಕಾರ್ಯಪಡೆ”

Date:

spot_img

ಮಂಗಳೂರು: ಕರಾವಳಿ ಪ್ರದೇಶದಲ್ಲಿ ಕೋಮು ಸಂಘರ್ಷ ತಡೆಯುವ ಉದ್ದೇಶದಿಂದ ರಚಿಸಲಾದ ವಿಶೇಷ ಕಾರ್ಯಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್)ಗೆ ಜೂನ್ 13 ರಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ಈ ವಿಶೇಷ ಕಾರ್ಯಪಡೆ ತನ್ನ ಕಚೇರಿ ಕಾರ್ಯಾಚರಣೆಯನ್ನು ನಿರ್ವಹಿಸಲಿದೆ.

ಉದ್ಘಾಟನಾ ಸಮಾರಂಭದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರುಗಳಾದ ಐವನ್ ಡಿ’ಸೋಜಾ ಹಾಗೂ ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ. ಸಲೀಂ, ಎಡಿಜಿಪಿ ಮುರುಗನ್, ಐಜಿಪಿ ಅಮಿತ್ ಸಿಂಗ್, ದ.ಕ. ಜಿಲ್ಲಾಧಿಕಾರಿ ಮುತ್ತೈ ಮುಗಿಲನ್, ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಎಸ್‌ಪಿ ಡಾ. ಅರುಣ್ ಕೆ ಮತ್ತು ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವಿಶೇಷ ಕಾರ್ಯಪಡೆ, ದ.ಕ., ಉಡುಪಿ ಮತ್ತು ಸುತ್ತಮುತ್ತಲಿನ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದಲ್ಲಿ ತಲೆಹೇನುಗಳ ಸಮಸ್ಯೆ ಹೆಚ್ಚಾಗಲು ಮಳೆಯೇ ಕಾರಣವೇ?

ಅದರಲ್ಲೂ ಮಳೆಯಲ್ಲಿ ನೆನೆಯುವುದರಿಂದ ತಲೆಯಲ್ಲಿ ಹೇನುಗಳಾಗುತ್ತವೆ ಎಂಬ ನಂಬಿಕೆ ಸಮಾಜದಲ್ಲಿ ವ್ಯಾಪಕವಾಗಿ ಹರಡಿದೆ.

ಹಾಲು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು: ಸತತ 3ನೇ ಬಾರಿ ತಾಲೂಕು ಉತ್ತಮ ಸಂಘ ಪ್ರಶಸ್ತಿ ಪಡೆದ ಗುಡ್ಡೆಯಂಗಡಿ

ದಕ್ಷಿಣ ಕನ್ನಡ ಜಿಲ್ಲೆಯ ಕುಲಶೇಖರ, ಮಂಗಳೂರು ಇದರ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತವು 2024-25ನೇ ಸಾಲಿನ ಉತ್ತಮ ಗುಣಮಟ್ಟದ ಹಾಲು ಉತ್ಪಾದಕರ ಸಂಘ ಪ್ರಶಸ್ತಿಯನ್ನು ಗುಡ್ಡೆಯಂಗಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೀಡಿ ಗೌರವಿಸಿದೆ

ರಜನಿಕಾಂತ್‌ರ “ಕೂಲಿ” ಚಿತ್ರದ ಟ್ರೈಲರ್ ಅಬ್ಬರ: ಕನ್ನಡಿಗ ಉಪೇಂದ್ರ ಪಾತ್ರದ ಬಗ್ಗೆ ಹೆಚ್ಚಿದ ಕುತೂಹಲ

ಸೂಪರ್‌ಸ್ಟಾರ್ ರಜನಿಕಾಂತ್ ಅವರ 171ನೇ ಸಿನಿಮಾ "ಕೂಲಿ" ಟ್ರೈಲರ್ ಬಿಡುಗಡೆಯಾಗಿ ದೇಶಾದ್ಯಂತ ದೊಡ್ಡ ಸಂಚಲನ ಮೂಡಿಸಿದೆ

ನೂತನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ: ಕುಲ್ಗಾಮ್‌ನಲ್ಲಿ 3 ಉಗ್ರರ ಹತ್ಯೆ

ಕಣಿವೆ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸ್ಥಾಪಿಸಲು ಭಾರತೀಯ ಸೇನೆಯು ಮತ್ತೊಂದು ಮಹತ್ವದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.