spot_img

ಬಸವೇಶ್ವರ ಆಸ್ಪತ್ರೆಯಲ್ಲಿ ವಿಕಲಚೇತನ ಮಕ್ಕಳಿಗೆ ವಿಶೇಷ ಆರೋಗ್ಯ ಶಿಬಿರ

Date:

spot_img

ಕಲಬುರ್ಗಿ : ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆ, ಓ ಆರ್ ಡಿ ಐ(ಆರ್ಗನೈಜೇಷನ್ ಆಫ್ ರೇರ್ ಡಿಸಿಜ್ ಆಫ್ ಇಂಡಿಯಾ), ವಿಕಾಸ ಅಕಾಡೆಮಿ, ಮನಸ್ವಿನಿ ಹಾಗೂ ಪರಿವರ್ತನಾ ಮಂದಿರ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಕಲಚೇತನ ಮಕ್ಕಳಿಗಾಗಿ ವಿಶೇಷ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಇದೇ ಆಗಸ್ಟ್ 10 ರವಿವಾರದಂದು ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ಶಿಬಿರವು ಸಂಪೂರ್ಣವಾಗಿ ಉಚಿತವಾಗಿದ್ದು ಬಸವೇಶ್ವರ ಆಸ್ಪತ್ರೆಯ ಮೂರನೇ ಮಹಡಿಯ ಹೊರ ರೋಗಿಗಳ ವಿಭಾಗದಲ್ಲಿ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಿ ಸಾಯಂಕಾಲ 4 ಗಂಟೆಯವರೆಗೆ ನಡೆಯಲಿದೆ.

ಈ ವಿಕಲಚೇತನರ ವಿಶೇಷ ಶಿಬಿರವನ್ನು ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ , ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ , ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ , ಆಸ್ಪತ್ರೆಯ ಸಂಚಾಲಕರಾದ ಡಾ ಕಿರಣ್ ದೇಶಮುಖ್ ಹಾಗೂ ವೈದ್ಯಕೀಯ ಮಹಾವಿದ್ಯಾಲಯದ ಸಂಚಾಲಕರಾದ ಡಾ ಶರಣಬಸಪ್ಪ ಹರವಾಳ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿರಲಿದ್ದಾರೆ.

ಈ ವಿಶೇಷ ಶಿಬಿರದಲ್ಲಿ ಮಕ್ಕಳ ಎಲ್ಲ ರೋಗಗಳಿಗೆ ಸಂಬಂಧಿಸಿದ ವಿಶೇಷ ತಜ್ಞ ವೈದ್ಯರು ಭಾಗವಹಿಸಿ ತಪಾಸಣೆ ಮಾಡಿ ಚಿಕಿತ್ಸೆ ನೀಡಲಿದ್ದಾರೆ. ಈ ಶಿಬಿರದ ನೇತೃತ್ವವನ್ನು ಮಕ್ಕಳ ನರ ರೋಗ ತಜ್ಞರಾದ ಡಾ ಆರುಂಧತಿ ಪಾಟೀಲ್ ವಹಿಸಲಿದ್ದಾರೆ. ಇವರ ತಂಡದಲ್ಲಿ ನೇತ್ರ ತಜ್ಞರು , ಕಿವಿ ಮೂಗು ಗಂಟಲು ತಜ್ಞ ವೈದ್ಯರು, ಚರ್ಮ ರೋಗ ತಜ್ಞರು , ದಂತ ವೈದ್ಯರು , ಮೂಳೆ ರೋಗ ತಜ್ಞರು , ಫಿಸಿಯೋಥೆರಪಿ ವಿಭಾಗದವರು ಹಾಗೂ ಆಪ್ತ ಸಮಾಲೋಚಕರು ಭಾಗವಹಿಸಲಿದ್ದಾರೆ. ಈ ವಿಶೇಷ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಐ ಕೆ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇಂಟೆಲ್‌ನ ಕೋರ್ 5 120 ಮತ್ತು 120F: ಹಳೆಯ ವಾಸ್ತುಶಿಲ್ಪ, ಹೊಸ ಲೇಬಲ್, ಹೆಚ್ಚಿನ ಬೆಲೆ

ಇಂಟೆಲ್ ತನ್ನ ಹೊಸ Core5 120U ಮತ್ತು 120F ಪ್ರೊಸೆಸರ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳು ಇಂಟೆಲ್‌ನ ಹೊಸ 'ಸರಣಿ 1' ಹೆಸರಿನಲ್ಲಿ ಬಿಡುಗಡೆಯಾಗಿದ್ದರೂ, ಇದರ ವಾಸ್ತುಶಿಲ್ಪವು ಹಳೆಯ ರಾಪ್ಟರ್ ಲೇಕ್ ಮತ್ತು ಆಲ್ಡರ್ ಲೇಕ್ ವಿನ್ಯಾಸಗಳನ್ನು ಆಧರಿಸಿದೆ. ಇದು ತಂತ್ರಜ್ಞಾನ ತಜ್ಞರ ಹಾಗೂ ಗ್ರಾಹಕರ ಗಮನ ಸೆಳೆದಿದೆ.

ಪ್ರತಿದಿನ ಬೆಳಿಗ್ಗೆ ತುಪ್ಪ ಬೆರೆಸಿದ ಬಿಸಿ ನೀರು ಕುಡಿದರೆ ಇಷ್ಟೆಲ್ಲಾ ಲಾಭ: ಆರೋಗ್ಯ ತಜ್ಞರಿಂದ ಸಲಹೆ

ಬಿಸಿನೀರಿಗೆ ಅರ್ಧ ಚಮಚ ತುಪ್ಪ ಬೆರೆಸಿ ಕುಡಿಯುವುದರಿಂದ ಇನ್ನಷ್ಟು ಉತ್ತಮ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸೇರಿದಂತೆ 6 ಮಂದಿ ಸಾವು

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ.

ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಯೂಟ್ಯೂಬ್‌ನಲ್ಲಿ ಅಶ್ಲೀಲವಾಗಿ ಮಾತನಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.