
ಹೆಬ್ರಿ : ಕ್ರೀಡೆಯನ್ನು ನಿಯಮಿತವಾಗಿ ದೈನಂದಿನ ಚಟುವಟಿಕೆಯಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅದು ಮಾನಸಿಕವಾಗಿ ಮತ್ತು ದೈಹಿಕವಾಗಿ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಧ್ಯಾನ್ ಚಂದ್ ಹೆಸರಿನಲ್ಲಿ ರಾಷ್ಟ್ರದಾದ್ಯಂತ ಕ್ರೀಡೆಯ ಮಹತ್ವ ಸಾರುವ ದಿನಾಚರಣೆಯನ್ನು ಮಾಡುತ್ತಿರುವುದು ನಿಜವಾಗಿಯೂ ಉತ್ತಮ ಕಾರ್ಯ ಎಂಬುದಾಗಿ ಮುದ್ರಾಡಿಯ ಹಿರಿಯ ವೈದ್ಯರು ಮತ್ತು ವಿದ್ಯಾಸಾಗರ ಎಜುಕೇಶನ್ ಟ್ರಸ್ಟಿನ ಖಜಾಂಚಿ ಡಾ. ಎಂ. ಎಸ್. ರಾವ್ ಹೇಳಿದರು.
ಅವರು ಆಗಸ್ಟ್ 29 ರಂದು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ನಡೆದ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟಿನ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ವಹಿಸಿದ್ದರು. ಬಹುಮಾನ ವಿಜೇತರ ಪಟ್ಟಿಯನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ರಘುಪತಿ ಹೆಬ್ಬಾರ್ ವಾಚಿಸಿದರು. ಮುಖ್ಯ ಶಿಕ್ಷಕ ಚಂದ್ರಶೇಖರ ಭಟ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ಪ್ರತಿಜ್ಞಾ ವಿಧಿ ಬೋಧಿಸಿದರು.ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕ ಕಾರ್ತಿಕ್ ಉಪಸ್ಥಿತರಿದ್ದರು. ಶಿಕ್ಷಕ ಆನಂದ ಕಾರ್ಯಕ್ರಮ ನಿರೂಪಿಸಿ, ಶ್ಯಾಮಲಾ ಕೊಠಾರಿ ವಂದಿಸಿದರು. ಚಂದ್ರಕಾಂತಿ ಹೆಗ್ಡೆ, ಮಹೇಶ್ ಕಾನ್ಗುಂಡಿ ಪಾಲ್ಗೊಂಡಿದ್ದರು.