ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ :ಡಾ. ಎಂ. ಎಸ್. ರಾವ್

Date:

spot_img

ಹೆಬ್ರಿ : ಕ್ರೀಡೆಯನ್ನು ನಿಯಮಿತವಾಗಿ ದೈನಂದಿನ ಚಟುವಟಿಕೆಯಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅದು ಮಾನಸಿಕವಾಗಿ ಮತ್ತು ದೈಹಿಕವಾಗಿ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಧ್ಯಾನ್ ಚಂದ್ ಹೆಸರಿನಲ್ಲಿ ರಾಷ್ಟ್ರದಾದ್ಯಂತ ಕ್ರೀಡೆಯ ಮಹತ್ವ ಸಾರುವ ದಿನಾಚರಣೆಯನ್ನು ಮಾಡುತ್ತಿರುವುದು ನಿಜವಾಗಿಯೂ ಉತ್ತಮ ಕಾರ್ಯ ಎಂಬುದಾಗಿ ಮುದ್ರಾಡಿಯ ಹಿರಿಯ ವೈದ್ಯರು ಮತ್ತು ವಿದ್ಯಾಸಾಗರ ಎಜುಕೇಶನ್ ಟ್ರಸ್ಟಿನ ಖಜಾಂಚಿ ಡಾ. ಎಂ. ಎಸ್. ರಾವ್ ಹೇಳಿದರು.
ಅವರು ಆಗಸ್ಟ್ 29 ರಂದು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ನಡೆದ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟಿನ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ವಹಿಸಿದ್ದರು. ಬಹುಮಾನ ವಿಜೇತರ ಪಟ್ಟಿಯನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ರಘುಪತಿ ಹೆಬ್ಬಾರ್ ವಾಚಿಸಿದರು. ಮುಖ್ಯ ಶಿಕ್ಷಕ ಚಂದ್ರಶೇಖರ ಭಟ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ಪ್ರತಿಜ್ಞಾ ವಿಧಿ ಬೋಧಿಸಿದರು.ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕ ಕಾರ್ತಿಕ್ ಉಪಸ್ಥಿತರಿದ್ದರು. ಶಿಕ್ಷಕ ಆನಂದ ಕಾರ್ಯಕ್ರಮ ನಿರೂಪಿಸಿ, ಶ್ಯಾಮಲಾ ಕೊಠಾರಿ ವಂದಿಸಿದರು. ಚಂದ್ರಕಾಂತಿ ಹೆಗ್ಡೆ, ಮಹೇಶ್ ಕಾನ್ಗುಂಡಿ ಪಾಲ್ಗೊಂಡಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.