
ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೈನ್ ಇಲ್ಲಿನ ವಿದ್ಯಾರ್ಥಿಗಳಿಗೆ ಕಾರ್ಕಳ ಜೋಡುರಸ್ತೆಯ ಶ್ರೀದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಪ್ರಸನ್ನ ಆಚಾರ್ಯ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ರಾವ್, ಉಪಾಧ್ಯಕ್ಷರಾದ ವೃಷಭರಾಜ ಕಡಂಬ, ನಿರ್ದೇಶಕರಾದ ದಿನೇಶ್ ಕುಮಾರ್ ವೈ, ಬೈಲೂರು ಶಾಖಾ ವ್ಯವಸ್ಥಾಪಕಿ ಸೌಮ್ಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದಾನಿಗಳನ್ನು ಶಾಲಾ ವತಿಯಿಂದ ಗೌರವಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಆಶಾ ಭಾನು ಸ್ವಾಗತಿಸಿ, ಸಹಶಿಕ್ಷಕ ಪ್ರಕಾಶ್ ಕುಂದರ್ ವಂದಿಸಿದರು. ಹಿರಿಯ ಸಹ ಶಿಕ್ಷಕಿ ಸುಮಾದೇವಿ ನಿರೂಪಿಸಿದರು. ಪೋಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.