spot_img

ಶ್ರೀ. ಕ್ಷೇ. ಧ. ಗ್ರಾ. ಯೋಜನೆಯಿಂದ ಕಾರ್ಕಳ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ

Date:

ಓಂ ಶ್ರೀ ಮಂಜುನಾಥಾಯ ನಮಃ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ಕಾರ್ಕಳ ತಾಲೂಕಿನ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ರಾಜಾಪುರ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕಿನ ಕೇಂದ್ರ ಸಮಿತಿಯ ಒಕ್ಕೂಟದ ಅಧ್ಯಕ್ಷರಾದ ಮಂಜುನಾಥ್ ಅವರು ವಹಿಸಿದ್ದು ಬಂದಿರುವ ಎಲ್ಲರಿಗೂ ಶುಭ ಹಾರೈಸಿದರು.ಉಡುಪಿ ಜಿಲ್ಲೆಯ ನಿರ್ದೇಶಕರಾದ ಶ್ರೀಯುತ ನಾಗರಾಜ್ ಶೆಟ್ಟಿಯವರು ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾದ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಎಲ್ಲಾ ಮಹಿಳೆಯರನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಪ್ರಭಾವಿ ವ್ಯಕ್ತಿಗಳನ್ನಾಗಿ ಮಾಡುವುದರ ಜೊತೆಗೆ ವಾತ್ಸಲ್ಯ ಕಾರ್ಯಕ್ರಮದ ಮೂಲಕ ಸಮಾಜದಲ್ಲಿ ತೀರಾ ಕೆಳಮಟ್ಟದಲ್ಲಿರುವವರಿಗೆ ಮನೆ ನಿರ್ಮಾಣ ಮಾಡುವ ಕಾರ್ಯಕ್ರಮ, ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಯೋಜನೆ ಕಳೆದ 42 ವರ್ಷಗಳಿಂದ ಮಾಡುತ್ತಾ ಬರುತ್ತಿದೆ ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನೀರೆ ರವೀಂದ್ರ ನಾಯಕ್ ಉಪಾಧ್ಯಕ್ಷರು ರಾಜಾಪುರ ಸಾರಸತ್ವ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿ.ಲಿ,ಇವರು ದೀಪವನ್ನು ಬೆಳಗಿಸಿ ಮಹಿಳೆಯರಿಗೆ ಉತ್ತಮ ಮಾಹಿತಿ ಮಾರ್ಗದರ್ಶನವನ್ನುನೀಡಿದರು. ಸಂಪನ್ಮೂಲ ವ್ಯಕ್ತಿಯಾದ ಜಯಶ್ರೀ ಭಟ್ ಇವರು ಸಂಸ್ಕೃತಿ ಸಂಸ್ಕಾರ ಉಳಿಸುವಿಕೆಯಲ್ಲಿ ಮಹಿಳೆಯರ ಪಾತ್ರ ವಿಷಯ ಮಂಡನೆ ಮಾಡಿದರು. ಹಾಗೂ ಈ ಕಾರ್ಯಕ್ರಮದ ವೇದಿಕೆಯಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಟೈಲರಿಂಗ್ ತರಬೇತಿಯನ್ನು ಹಮ್ಮಿಕೊಂಡಿದ್ದು ಈ ತರಬೇತಿಯನ್ನು ಪಡೆದುಕೊಂಡ ಶ್ರೀದೇವಿ ಸದಸ್ಯರಿಗೆ ರೋಟರಿ ಕ್ಲಬ್ ವತಿಯಿಂದ ಉಚಿತ ಟೈಲರಿಂಗ್ ಮಿಷಿನ್ ವಿತರಣೆಯನ್ನು ಮಾಡಲಾಯಿತು ಹಾಗೂ ಈ ಕಾರ್ಯಕ್ರಮದಲ್ಲಿ ಉದಯ್ ಕುಮಾರ್ ಹೆಗ್ಡೆ ಅಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ )ಕಾರ್ಕಳ ,ಇಕ್ಬಾಲ್ ಅಹಮ್ಮದ್ ಅಧ್ಯಕ್ಷರು ರೋಟರಿ ಕ್ಲಬ್ ಕಾರ್ಕಳ ,ಜೆಸಿ ಶ್ವೇತಾ ಎಸ್ ಜೈನ್ ಅಧ್ಯಕ್ಷರು ಜೆಸಿಐ ಕಾರ್ಕಳ ಉಪಸ್ಥಿತರಿದ್ದರು. ಒಕ್ಕೂಟದ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಎಲ್ಲಾ ಸಂಯೋಜಕರು ಮತ್ತು ಸದಸ್ಯರು ಉಪಸ್ಥಿತರಿದ್ದರು. , ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಮಹಿಳೆಯರಿಗೆ ರಂಗೋಲಿ, ಪುಷ್ಪಗುಚ್ಛ,ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಕಾರ್ಕಳ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಮತಿ ಹೇಮಲತಾರವರು ಸ್ವಾಗತಿಸಿದರು ಕಾರ್ಯಕ್ರಮದಲ್ಲಿ ಕಾರ್ಕಳ ವಲಯದ ಮೇಲ್ವಿಚಾರಕಿಯಾದ ಗೀತಾ ಹೆಗ್ಡೆ ರವರು ನಿರೂಪಣೆಯನ್ನು ಮಾಡಿದರು , ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶ್ರೀಮತಿ ಲಕ್ಷ್ಮಿರವರು ಕಾರ್ಯಕ್ರಮದ ವರದಿ ವಾಚಿಸಿದರು.ಬಂಗ್ಲೆಗುಡ್ಡೆಯ ಸೇವಾಪ್ರತಿನಿಧಿ ಸುನೀತಾ ಶೆಟ್ಟಿಯವರು ಧನ್ಯವಾದ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ಆತ್ಮಹತ್ಯಾ ನಿರೋಧ ದಿನ

ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.

ಆಪಲ್‌ನಿಂದ ಐಫೋನ್ ಲೋಕಕ್ಕೆ ಹೊಸ ಸ್ಪರ್ಧಿ: ಅತಿ ತೆಳುವಾದ ‘ಐಫೋನ್ ಏರ್’ ಅನಾವರಣ!

ಅತಿ ತೆಳುವಾದ ಐಫೋನ್ 'ಏರ್' ಮಾದರಿ, ಹೊಸ ವೈಶಿಷ್ಟ್ಯಗಳೊಂದಿಗೆ ಐಫೋನ್ 17, ಸುಧಾರಿತ ಏರ್‌ಪಾಡ್ಸ್ ಪ್ರೊ 3 ಮತ್ತು ರಕ್ತದೊತ್ತಡ ಮಾನಿಟರ್ ಹೊಂದಿರುವ ಆಪಲ್ ವಾಚ್.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.