spot_img

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ಶ್ರೀ ಕ್ಷೇತ್ರದಲ್ಲಿ ನಡೆಯುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆ

Date:

spot_img

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಧರ್ಮಸ್ಥಳ ಇದರ ವತಿಯಿಂದ ಸೆ.14 ರಿಂದ ಸೆ.21ರ ವರೆಗೆ ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆಯು ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಉಡುಪಿ-ಅಂಬಲಪಾಡಿ ಪ್ರಗತಿ ಸೌಧ ಸಭಾಂಗಣದಲ್ಲಿ ನಡೆಯಿತು.

ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಪೂರ್ವಭಾವಿ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಸೆ.14ರಿಂದ ಸೆ.21ರ ವರೆಗೆ ಶ್ರೀ ಕ್ಷೇತ್ರದಲ್ಲಿ ಪೂಜ್ಯರ ಮಾರ್ಗದರ್ಶನದಲ್ಲಿ ನಡೆಯಲಿರುವ 27ನೇ ಭಜನಾ ತರಬೇತಿ ಕಮ್ಮಟ, ಭಜನೋತ್ಸವ ಹಾಗೂ ಭಜನಾ ಮಂಡಳಿಗಳ ಸಾಧಕ ಪ್ರಶಸ್ತಿಯ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಭಜನಾ ತರಬೇತಿ ಕಮ್ಮಟದಲ್ಲಿ ಭಾಗವಹಿಸಲು ಹೆಸರು ನೊಂದಾಯಿಸುವ ಉಡುಪಿ ತಾಲೂಕಿನ ಭಜನಾ ಮಂಡಳಿಗಳಿಗೆ ಆ.10ರೊಳಗೆ ಸಭೆ ನಡೆಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕರಾವಳಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಅವರು ಶ್ರೀ ಕ್ಷೇತ್ರದಿಂದ ಭಜನಾ ಸಂಸ್ಕಾರ ಬೆಳೆದು ಬಂದ ರೀತಿಯನ್ನು ವಿಶ್ಲೇಷಿಸಿ ಮಾತನಾಡಿ, ಡಾ! ಡಿ.ವೀರೇಂದ್ರ ಹೆಗ್ಗಡೆಯವರ ದೂರದರ್ಶಿತ್ವದ ಚಿಂತನೆಯ ಫಲವಾಗಿ ಶಿಕ್ಷಣದ ಜೊತೆಗೆ ಭಜನಾ ಸಂಸ್ಕಾರ, ಭಜನೆಯೊಂದಿಗೆ ವ್ಯಕ್ತಿತ್ವ ನಿರ್ಮಾಣದಂತಹ ಸತ್ಕಾರ್ಯ ನಡೆಯುತ್ತಿದೆ. ದಾಸ ವಾಣಿಯ ಸತ್ವಗಳ ಮೂಲಕ ಭಜನೆ ಇಂದು ಸಂಘಟನಾತ್ಮಕ ರೂಪ ತಳೆದು ಎಲ್ಲೆಡೆ ಪ್ರಚಲಿತವಾಗಿದೆ. ಎಲ್ಲರ ಸಂಘಟಿತ ಪ್ರಯತ್ನದ ಮೂಲಕ ಭಜನಾ ಪರಿಷತ್ ಪರಿಣಾಮಕಾರಿ ಭಜನಾ ಕ್ರಾಂತಿಗೆ ನಾಂದಿ ಹಾಡುವಂತಾಗಲಿ ಎಂದರು.

ಭಜನಾ ಪರಿಷತ್ ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ಭಜನಾ ಪರಿಷತ್ತಿನ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಕೋಶಾಧಿಕಾರಿ ಪೂರ್ಣಿಮಾ ಪೆರ್ಡೂರು ಮಾತನಾಡಿ, ಭಜನಾ ತರಬೇತಿ ಕಮ್ಮಟದಲ್ಲಿ ಭಾಗವಹಿಸಿದ ಅನುಭವವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ಉಡುಪಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ್, ವಲಯ ಮೇಲ್ವಿಚಾರಕರು, ಭಜನಾ ಪರಿಷತ್ ವಲಯ ಸಂಯೋಜಕರು, ಸಹ ಸಂಯೋಜಕರು ಹಾಗೂ ಭಜನಾ ಮಂಡಳಿಗಳ ಸದಸ್ಯರು ಉಪಸ್ಥಿತರಿದ್ದರು.

ಯೋಜನೆಯ ಅಂಬಲಪಾಡಿ ವಲಯ ಮೇಲ್ವಿಚಾರಕಿ ಪ್ರೇಮಾ ಸ್ವಾಗತಿಸಿದರು. ಮಣಿಪಾಲ ವಲಯ ಮೇಲ್ವಿಚಾರಕ ಬಾಲಚಂದ್ರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಗಸ್ಟ್ 12 ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14ರ ವರೆಗೆ ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಮುದ್ರಾಡಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಬಜಗೋಳಿ ಸಿ. ಆರ್. ಪಿ. ಕೃಷ್ಣಕುಮಾರ್ ಅವರು ಮುದ್ರಾಡಿಯ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಪರಶುರಾಮ ಥೀಮ್ ಪಾಕ್: ವಿವಿಧ ಹಂತದ ಹೋರಾಟ, ಜನಜಾಗೃತಿಗೆ ಬಿಜೆಪಿ ನಿರ್ಧಾರ; ತಾಲೂಕು, ಜಿಲ್ಲೆ, ರಾಜ್ಯಮಟ್ಟ ಮೂರು ಹಂತದಲ್ಲಿ ಹೋರಾಟಕ್ಕೆ ಸಿದ್ಧತೆ

ಮಾಜಿ ಸಚಿವ, ಶಾಸಕರಾದ ವಿ.ಸುನಿಲ್ ಕುಮಾರ್ ಅವರು ಕಾರ್ಕಳದ ವಿಕಾಸ ಕಚೇರಿಯಲ್ಲಿ ಶನಿವಾರ ನಡೆದ ಹೋರಾಟದ ರೂಪುರೇಷಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ರಷ್ಯಾ-ಭಾರತ ಆರ್ಥಿಕತೆ ನಾಶವಾಗಲಿ ಎಂದ ಟ್ರಂಪ್; ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಕ್ಕೆ ಅಮೆರಿಕದಲ್ಲಿ ಅಸಮಾಧಾನ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ಭಾರತ ಮತ್ತು ರಷ್ಯಾವನ್ನು "ಸತ್ತ ಆರ್ಥಿಕತೆಗಳು" ಎಂದು ಜರೆದಿದ್ದಾರೆ.