
ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳು ಮತ್ತು ಪೋಷಕರು ನಿರೀಕ್ಷಿಸುತ್ತಿದ್ದ ಕ್ಷಣ ಕೊನೆಗೂ ಬಂದಿದೆ. 2024-25ನೇ ಸಾಲಿನ ಎಸ್‌ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಇಂದು ಅಧಿಕೃತವಾಗಿ ಪ್ರಕಟಿಸಿದೆ.
ಈ ಬಾರಿಯೂ ಬಾಲಕಿಯರೇ ಹೆಚ್ಚು ಅಂಕ ಗಳಿಸಿ ಮೇಲುಗೈ ಸಾಧಿಸಿದ್ದು, ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ, ಉಡುಪಿ ಜಿಲ್ಲೆ ಎರಡನೇ ಸ್ಥಾನ ಪಡೆದಿವೆ.
ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ರಾಜ್ಯದ 2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್ಎಲ್ಸಿ ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಗೆ ಒಟ್ಟು 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಬಾರಿಗೆ 66.14% ಶೇಕಡಾ ಫಲಿತಾಂಶ ದಾಖಲಾಗಿದ್ದು, ಕಳೆದ ವರ್ಷದ ಅಂಕಿಗಳಿಗಿಂತ ಕೊಂಚ ಕಡಿಮೆಯಾಗಿದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ಪರಿಶೀಲಿಸಬಹುದಾಗಿದೆ.
ಫಲಿತಾಂಶ ಪ್ರಕಟಿಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಬಾಲಕಿಯರು ಮತ್ತೆ ಮೇಲುಗೈ ಸಾಧಿಸಿದ್ದು ಸಂತೋಷದ ಸಂಗತಿ. ಈ ಬಾರಿಯೂ ಫಲಿತಾಂಶ ಪ್ರಕ್ರಿಯೆ ಹೆಚ್ಚು ಪಾರದರ್ಶಕವಾಗಿ ನಡೆದಿದ್ದು, ಯಾವುದೇ ದೋಷಗಳಿಲ್ಲದೆ ಯಶಸ್ವಿಯಾಗಿ ಘೋಷಿಸಲಾಗಿದೆ,” ಎಂದರು.