
ಆಂಧ್ರಪ್ರದೇಶ: ಪ್ರಸಿದ್ಧ ತಿರುಪತಿ ದೇವಸ್ಥಾನದಲ್ಲಿ ಬುಧವಾರ (ಜನವರಿ 8) ರಂದು ರಾತ್ರಿ ದುರಂತ ಸಂಭವಿಸಿದೆ.
ವೈಕುಂಠ ಏಕಾದಶಿಯ ದರ್ಶನದ ಟಿಕೆಟ್ ಕೌಂಟರ್ ಬಳಿ ಉಂಟಾದ ನೂಕು ನುಗ್ಗಲಿನಲ್ಲಿ ಕಾಲ್ತುಳಿತಕ್ಕೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ ಪಡೆಯಲು ತಿರುಪತಿಯ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು ಆದರೆ ಜನರ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ.
ಮೃತರಲ್ಲಿ ತಮಿಳುನಾಡಿನ ಮಹಿಳೆಯೂ ಸೇರಿದ್ದಾರೆ. ಗಾಯಾಳುಗಳಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಬಿ.ಆರ್.ನಾಯ್ಡು ಅವರು ತುರ್ತು ಸಭೆ ಕರೆದಿದ್ದು, ಭಕ್ತರ ಸುರಕ್ಷತೆಗಾಗಿ ಮುಂದಿನ ಕ್ರಮಗಳ ಕುರಿತು ಚರ್ಚಿಸಿದ್ದಾರೆ