ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ದುರಂತ: ಕ್ರೀಡಾಂಗಣ ಸ್ಥಳಾಂತರದ ಸಾಧ್ಯತೆ ಬಗ್ಗೆ ಸಿಎಂ ಚಿಂತನೆ

Date:

spot_img

ಮೈಸೂರು : ಬೆಂಗಳೂರು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ 11 ಮಂದಿ ದುರ್ಮರಣಕ್ಕೊಳಗಾಗಿದ್ದು, ಇನ್ನೂ 56ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂತಹ ದುರ್ಘಟನೆ ರಾಜ್ಯದಲ್ಲಿ ಮರುಕಳಿಸಬಾರದು ಎಂಬ ದೃಢ ನಿಲುವು ವ್ಯಕ್ತಪಡಿಸಿದ್ದಾರೆ. “ಈ ಘಟನೆ ನನಗೆ ಮತ್ತು ನನ್ನ ಸರ್ಕಾರಕ್ಕೆ ವೈಯಕ್ತಿಕವಾಗಿ ತೀವ್ರ ನೋವು ತಂದಿದೆ. ಯಾವುದೇ ಸರ್ಕಾರದ ಕಾಲದಲ್ಲೂ ಇಂತಹ ಘಟನೆ ಸಂಭವಿಸಬಾರದು,” ಎಂದು ಅವರು ತಿಳಿಸಿದ್ದಾರೆ.

ಸಿ ಎಂ ಸಿದ್ದರಾಮಯ್ಯನವರು ಚಿನ್ನಸ್ವಾಮಿ ಕ್ರೀಡಾಂಗಣವನ್ನು ಭವಿಷ್ಯದಲ್ಲಿ ಸ್ಥಳಾಂತರಿಸುವ ಸಾಧ್ಯತೆಗಳನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಹೇಳಿದರು. ಕ್ರೀಡಾಂಗಣದ ಸ್ಥಳವನ್ನು ಹೆಚ್ಚು ಸುರಕ್ಷಿತ, ಯೋಜಿತ ಸ್ಥಳಕ್ಕೆ ಸ್ಥಳಾಂತರಿಸುವ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು.

ಈ ಮಧ್ಯೆ, ಈ ದುರಂತದ ಕುರಿತು ವಿರೋಧ ಪಕ್ಷಗಳಾದ — ಬಿಜೆಪಿ ಹಾಗೂ ಜೆಡಿಎಸ್ — ಸರ್ಕಾರದ ಮೇಲೆ ರಾಜಕೀಯ ಪ್ರೇರಿತ ಟೀಕೆ ಮಾಡುತ್ತಿವೆ. ಸರ್ಕಾರ ಜನರ ಸುರಕ್ಷತೆಗೆ ಆದ್ಯತೆ ನೀಡಿದ್ದು, ಇಂತಹ ದುರಂತಗಳು ಮರುಕಳಿಸದಂತೆ ಸಮಗ್ರ ಪರಿಶೀಲನೆ ನಡೆಸಲಾಗುವುದು. ಭದ್ರತಾ ಕ್ರಮಗಳ ವಿಫಲತೆಗಳ ಬಗ್ಗೆ ತನಿಖೆ ನಡೆಯಲಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.