
ಬೆಂಗಳೂರು: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್! ಎಲೆ ಚುಕ್ಕೆ ರೋಗ ಮತ್ತು ಹಳದಿ ಎಲೆ ರೋಗದಿಂದ ತೊಂದರೆ ಅನುಭವಿಸುತ್ತಿರುವ ರೈತರಿಗೆ ಶೀಘ್ರ ಪರಿಹಾರಧನ ನೀಡಲು ರಾಜ್ಯ ಸರ್ಕಾರ ನಿರ್ಧಾರಿಸಿದೆ.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, 2023-24ನೇ ಸಾಲಿನಲ್ಲಿ 6,250 ಹೆಕ್ಟೇರ್ ಪ್ರದೇಶದ 12,300 ಅಡಿಕೆ ಬೆಳೆಗಾರರಿಗೆ ₹2.50 ಕೋಟಿ ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಪ್ರತಿ ಹೆಕ್ಟೇರ್‌ಗೆ ₹4000 ಮೊತ್ತದ ಸಸ್ಯ ಸಂರಕ್ಷಣಾ ಔಷಧಿ ನೀಡಲಾಗಿದ್ದು, ಗರಿಷ್ಠ ₹6000 ಸಹಾಯಧನ ದೊರಕಲಿದೆ ಎಂದು ಹೇಳಿದರು.
ಅಡಿಕೆ ಕಟಾವು ಯಂತ್ರ ಖರೀದಿಗೆ ಸಹಾಯಧನ: ಕೃಷಿ ಯಾಂತ್ರೀಕರಣ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ 40%, ಪರಿಶಿಷ್ಟ ಜಾತಿ/ಪಂಗಡದವರಿಗೆ 50% ಶೇ. ಸಹಾಯಧನ ನೀಡಲಾಗುತ್ತಿದ್ದು, 2023-24ನೇ ಸಾಲಿನಲ್ಲಿ 1,201 ರೈತರಿಗೆ ₹3.66 ಕೋಟಿ ನೀಡಲಾಗಿದೆ.
ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ತಜ್ಞರ ಸಹಾಯದಿಂದ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮಗಳನ್ನು ಸರ್ಕಾರ ಕೈಗೆತ್ತಿಕೊಂಡಿದೆ.